ಪುತ್ತೂರು:ಮಾದಕ ದ್ರವ್ಯ ಸೇವನೆ ಮಾಡಿದ ಯುವಕನೋರ್ವನನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ಕೆಮ್ಮಿಂಜೆ ಮರೀಲ್ ನಿವಾಸಿ ಮಹಮ್ಮದ್ ಅನೀಶ್(29ವ)ಎಂದು ಗುರುತಿಸಲಾಗಿದೆ.ನ.19ರಂದು ಪುತ್ತೂರು ನಗರ ಪೊಲೀಸ್ ಠಾಣೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ದರ್ಬೆ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿ ಓಡಿ ಹೋಗಲು ಪ್ರಯತ್ನಿಸಿದಾಗ ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆತ ನಶೆಯಲ್ಲಿದ್ದಂತೆ ಕಂಡು ಬಂದಿತ್ತು.ಆತನನ್ನು ವಿಚಾರಿಸಿದಾಗ ಮಹಮ್ಮದ್ ಅನೀಶ್ ಎಂದು ತಿಳಿಸಿದಂತೆ ಸರಕಾರಿ ಆಸ್ಪತ್ರೆಯ ವೈದ್ಯರ ಮುಂದೆ ಹಾಜರುಪಡಿಸಿದಾಗ ವೈದ್ಯರು ಪರೀಕ್ಷಿಸಿ ಆತ ಮಾದಕ ವಸ್ತು ಸೇವನೆ ಮಾಡಿರುವುದು ದೃಢವಾಗಿದ್ದು,ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
