





ಸವಣೂರು: ಕುಮಾರಮಂಗಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ/ಪೋಷಕರ ಮಹಾಸಭೆ ಮತ್ತು ಕ್ರೀಡಾಕೂಟ ನಡೆಯಿತು.


ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮಹೇಶ್ ಕೆ ಸವಣೂರು ಉದ್ಘಾಟಿಸಿ ಮಾತನಾಡಿ ಮಕ್ಕಳು ಶಿಕ್ಷಣಕ್ಕೆ ಒತ್ತನ್ನು ನೀಡುವ ಪ್ರಯತ್ನ ಮಾಡಬೇಕು. ಮಕ್ಕಳ ಆಸಕ್ತಿಯಂತೆ ಪೋಷಕರು ಮತ್ತು ಶಿಕ್ಷಕರು ಪ್ರೋತ್ಸಾಹಿಸಿದಾಗ ಅಂತಹ ವಿದ್ಯಾರ್ಥಿಯು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಮೂಡಿಬರಲು ಸಾಧ್ಯವಿದೆ. ಸರಕಾರಿ ಶಾಲೆಗಳನ್ನು ಉಳಿಸುವ ಪ್ರಯತ್ನವನ್ನು ಪ್ರತಿಯೊಬ್ಬ ಪೋಷಕರು ಮಾಡಬೇಕಾದ ಅನಿವಾರ್ಯತೆ ಇದೆ ಎಂದರು.






ಸಮಾರಂಭದ ಮುಖ್ಯ ಅತಿಥಿಯಾಗಿ ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ಗಿರಿಶಂಕರ ಸುಲಾಯ ಮಾತನಾಡಿ ವಿದ್ಯಾರ್ಥಿಗಳು ಪ್ರಾಥಮಿಕ ಹಂತದಲ್ಲಿ ತಾನು ಮುಂದೆ ಏನು ಆಗಬೇಕೆಂಬ ಗುರಿಯನ್ನು ಇಟ್ಟುಕೊಂಡಾಗ ಜೊತೆಗೆ ನಿರಂತರ ಅಧ್ಯಯನ ಪ್ರಯತ್ನ ಮಾಡಿದಾಗ ಆತನು ಕಂಡಿರುವ ಕನಸು ನನಸಾಗಲು ಸಾಧ್ಯವಿದೆ. ಮಾತ್ರವಲ್ಲದೇ ತನ್ನನ್ನು ಬೆಳೆಸಿದ ಶಾಲೆ, ಶಿಕ್ಷಕರು, ಪೋಷಕರು ಹಾಗೂ ಊರನ್ನು ಯಾವತ್ತು ಮರೆಯಬಾರದು ಎಂದರು.ಕುಮಾರಮಂಗಲ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷೆ ಹೇಮಲತಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಶುಭಹಾರೈಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಎಸ್.ಡಿಎಂಸಿ ಉಪಾಧ್ಯಕ್ಷ ಗಂಗಾಧರ ಕನ್ಯಾಮಂಗಲ, ಗ್ರಾಮ ಪಂಚಾಯತ್ ಸದಸ್ಯೆ ಯಶೋಧಾ ನೂಜಾಜೆ, ಶಾಲಾ ನಾಯಕ ಧನ್ವಿತ್ ಪಿ.ಕೆ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕುಮಾರಿ ವೈಷ್ಣವಿ, ವೈಭವಿ ಪ್ರಾರ್ಥಿಸಿದರು. ಕುಮಾರಿ ವೈಷ್ಣವಿ ಜಿ.ಎಸ್ ಸಂವಿಧಾನಿಕ ಪೀಠಿಕೆ ಪಠಿಸಿದರು. ಶಾಲಾ ಮುಖ್ಯಗುರುಗಳಾದ ಸಂತೋಷ್ ಎನ್.ಟಿ ಸ್ವಾಗತಿಸಿ ಪ್ರಾಸ್ತವಿಕ ಮಾತನಾಡಿದರು.

ಅತಿಥಿ ಶಿಕ್ಷಕರಾದ ಶ್ಯಾಮ್ ಕೆ ವಂದಿಸಿದರು. ಗೌರವ ಶಿಕ್ಷಕಿಯರಾದ ಕುಮಾರಿ ರಾಜೇಶ್ವರಿ ಕನ್ಯಾಮಂಗಲ, ಸುಪ್ರಿಯಾ ಕಾರ್ಯಕ್ರಮ ನಿರೂಪಿಸಿದರು.










