ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ಉಪ್ಪಿನಂಗಡಿ, ವಳಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಹಯೋಗದಲ್ಲಿ ನ.22ರಂದು ವಳಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಚೈತನ್ಯ ಸಭಾಭವನದಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ ನಡೆಯಲಿದೆ.
ಬೆಳಗ್ಗೆ 9 ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಮಾಜಿ ಶಾಸಕರಾದ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಲಿದ್ದಾರೆ. ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಅಧ್ಯಕ್ಷತೆ ವಹಿಸಲಿದ್ದಾರೆ.
ಬಜತ್ತೂರು ಗ್ರಾ.ಪಂ. ಅಧ್ಯಕ್ಷರಾದ ಗಂಗಾಧರ ಪಿ.ಎನ್.,ವಳಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಪಿಜಕ್ಕಳ ಉಪಸ್ಥಿತರಿರಲಿದ್ದಾರೆ. ಬೆಳಗ್ಗೆ 9.30ರಿಂದ ಸಿ.ಪಿ.ಸಿ.ಆರ್.ಐ. ಪ್ರಾದೇಶಿಕ ಕೃಷಿ ಕೇಂದ್ರ ವಿಟ್ಲ ಇದರ ನುರಿತ ಕೃಷಿ ವಿಜ್ಞಾನಿಗಳಿಂದ ‘ಅಡಿಕೆ ಕೃಷಿಯಲ್ಲಿ ಗೊಬ್ಬರದ ಬಳಕೆ, ಸೂಕ್ಷ್ಮ ಪೋಷಕಾಂಶದ ಸಮಗ್ರ ನಿರ್ವಹಣೆ ಮತ್ತು ರೋಗಗಳ ಹತೋಟಿ’ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.