





ಪುತ್ತೂರು: ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು ತಾಲೂಕು ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ-2025 ನ.23 ರಂದು ಜ್ಯೂನಿಯರ್ ಕಾಲೇಜು ಕ್ರೀಡಾಂಗಣ ಕೊಂಬೆಟ್ಟು ಇಲ್ಲಿ ನಡೆಯಲಿದೆ.


ಪ್ರಗತಿಪರ ಕೃಷಿಕರಾದ ವಾಸು ಪೂಜಾರಿ ಗುಂಡ್ಯಡ್ಕರವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಅಣ್ಣಿ ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಎಸೋಸಿಯೇಶನ್, ಮಂಗಳೂರು ಇದರ ಅಧ್ಯಕ್ಷ ಬಿ.ಎಸ್. ಸತೀಶ್ ಕುಮಾರ್, ರಾಷ್ಟ್ರೀಯ ಕ್ರೀಡಾಪಟು ಸೌಮ್ಯ ಎ. ಕಾಣಿಯೂರು, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೃಷ್ಣಪ್ಪ ಅಮೈರವರು ಭಾಗವಹಿಸಲಿದ್ದಾರೆ.





ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಬಿ. ಅಣ್ಣಿ ಪೂಜಾರಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ರವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂರ್ತೆದಾರರ ಮಹಾಮಂಡಲ ಬಿ.ಸಿ.ರೋಡ್ ಇದರ ಅಧ್ಯಕ್ಷ ಸಂಜೀವ ಪೂಜಾರಿ, ಪುತ್ತೂರು ಅಕ್ಷಯ ಕಾಲೇಜು ಅಧ್ಯಕ್ಷ ಜಯಂತ ನಡುಬೈಲು, ಶ್ರೀ ಕ್ಷೇತ್ರ ಗೆಜ್ಜೆಗಿರಿ ಪ್ರಧಾನ ಕಾರ್ಯದರ್ಶಿ ಹಾಗೂ ದಂತ ವೈದ್ಯ ಡಾ. ರಾಜಾರಾಮ್ ಕೆ. ಬಿ.,
ಸುಬ್ರಹ್ಮಣ್ಯ ಸನಾಜ ಸೇವಾ ಟ್ರಸ್ಟ್ ನ ಅಧ್ಯಕ್ಷ ಡಾ.ರವಿ ಕಕ್ಕೆಪದವು, ಯುವವಾಹಿನಿ ಪುತ್ತೂರು ಘಟಕದ ಕ್ರೀಡಾ ನಿರ್ದೇಶಕ ಗೌತಮ್ ಪಿ.ರವರು ಭಾಗವಹಿಸಲಿದ್ದಾರೆ ಎಂದು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಬಿ.ಅಣ್ಣಿ ಪೂಜಾರಿ, ಕಾರ್ಯದರ್ಶಿ ಶರತ್ ಸಾಲ್ಯಾನ್ ದೋಳ, ಕ್ರೀಡಾ ನಿರ್ದೇಶಕ ಗೌತಮ್ ಪಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಪರ್ಧೆಯ ವಿವರಗಳು..
ಪುರುಷರಿಗೆ :
ಕ್ರಿಕೆಟ್ (ಓವರ್ ಆರ್ಮ್)
ಹಗ್ಗಜಗ್ಗಾಟ, ವಾಲಿಬಾಲ್
ಮಹಿಳೆಯರಿಗೆ :
ತ್ರೋಬಾಲ್, ಹಗ್ಗಜಗ್ಗಾಟ
ಮಕ್ಕಳಿಗೆ :
ಎಲ್.ಕೆ.ಜಿ.ಯಿಂದ 7ನೇ ತರಗತಿಯವರೆಗಿನ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು








