





ಪುತ್ತೂರು ; ವ್ಯಕ್ತಿ ಬದುಕನ್ನು ರೂಪಿಸುವುದರಲ್ಲಿ ಶಿಕ್ಷಣಕ್ಕೆ ಪ್ರಮುಖ ಪಾತ್ರವಿದೆ.ವಿದ್ಯಾರ್ಥಿಜೀವನದಲ್ಲಿ ನಾವೇನು ಕಲಿಯುತ್ತೇವೆಯೋ ಅದು ನಮ್ಮ ಭವಿಷ್ಯವನ್ನು ರೂಪಿಸುತ್ತದೆ.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಕಾರಣ ಶಿಕ್ಷಣ ಸಂಸ್ಥೆಗಳು ಅನೇಕ ರೀತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತದೆ.ಕಾರ್ಯಾಗಾರಗಳು ಪಠ್ಯಕ್ಕೆ ಸಂಬಂಧಿಸಿದ್ದಾಗಿರಬಹುದು ಅಥವಾ ಬದುಕನ್ನು ರೂಪಿಸುವ ಬಗೆ ಹೇಗೆ ಎಂಬ ಕುರಿತಾಗಿರಬಹುದು.ಇಂತಹ ಕಾರ್ಯಾಗಾರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನವಾಗಲು ಸಾಧ್ಯ. ಎಂದು ಸರಸ್ವತಿ ವಿದ್ಯಾಕೇಂದ್ರ ನರಿಮೊಗರು ಇದರ ಅಧ್ಯಕ್ಷರಾದ ಅವಿನಾಶ್ ಕೊಡಂಕಿರಿ ಇವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಭವಿಷ್ಯವು ಯುವಶಕ್ತಿಯನ್ನು ಅವಲಂಬಿಸಿದೆ.ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಜನಾಂಗವು ಅತ್ಯಾಧುನಿಕ ಕೌಶಲ್ಯ ಮತ್ತು ಜ್ಞಾನವನ್ನು ಹೊಂದಿರಬೇಕು ಹಾಗೂ ತನ್ನಲ್ಲಿರುವ ದೌರ್ಬಲ್ಯವನ್ನು ಅರಿತುಕೊಂಡು ಶಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಹೇಳಿದರು.





ಕಾರ್ಯಕ್ರಮದಲ್ಲಿಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮಾತನಾಡುತ್ತಾ, ಆಧುನಿಕ ಹಾಗೂ ಸ್ಪರ್ಧಾತ್ಮಕಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣದ ಜೊತೆಗೆ ಕಾರ್ಯಾಗಾರಗಳ ಅವಶ್ಯಕತೆಯಿದೆ.ಶಿಕ್ಷಣ ಕ್ಷೇತ್ರದಲ್ಲಿಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ.ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪೋಷಕರಾದ ಶ್ರೀಮತಿ ಯಶೋಧ ಮೋಹನ್ ರವರು ಮಾತನಾಡುತ್ತಾಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಮುಂದಿನ ಭವಿಷ್ಯಕ್ಕಾಗಿ ಜೀವನದ ಮೌಲ್ಯಗಳ ಮಹತ್ವವನ್ನು ಅರಿತುಕೊಂಡರೆ ಮೌಲ್ಯಾಧಾರಿತ ಜೀವನ ನಡೆಸಲು ಸಾಧ್ಯವಾಗುತ್ತದೆ.ಇದರ ಜತೆಯಲ್ಲಿ ತನ್ನ ಭವಿ?ದ ಬಗ್ಗೆ ಮನಸಿನಲ್ಲಿ ಗುರಿಯನ್ನಿಟ್ಟುಕೊಂಡು ಆಶಾವಾದಿಗಳಾಗಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು.ಭೌತಶಾಸ್ತ್ರ , ರಸಾಯನ ಶಾಸ್ತ್ರ, ಜೀವಶಾಸ್ತ್ರ ಮತ್ತು ಇತರ ವಿಜ್ಞಾನ ಪ್ರಯೋಗಗಳ ವೀಕ್ಷಣೆ ಕಾಲೇಜಿನ ಪ್ರಯೋಗಾಲಯಗಳಲ್ಲಿ ನಡೆಯಿತು. ಈ ಕಾರ್ಯಾಗಾರಕ್ಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.ಪ್ರತೀ ವರ್ಷವು ಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ಗಣೇಶ್ ಇವರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ಸ್ವಾಗತಿಸಿ,ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸಿಂಧು ಸರಳಾಯ ವಂದಿಸಿದರು.









