






ಪುತ್ತೂರು: ಪುತ್ತೂರಿನ ಕಾಂಪ್ಲೆಕ್ಸ್‌ವೊಂದರಲ್ಲಿ ವಾಹನಗಳ ಪೈಂಟಿಂಗ್ ಕೆಲಸ ಮಾಡುತ್ತಿದ್ದ ಇಡ್ಕಿದು ನಿವಾಸಿ ಹರೀಶ್ ಎಂಬವರು ಆತ್ಮಹತ್ಯೆ ಮಾಡಿಕೊಂಡ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಇದೀಗ ಕಿರುಕುಳ ಮತ್ತು ಹಲ್ಲೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರಿ ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಬಂಟ್ವಾಳದ ಇಡ್ಕಿದು ನಿವಾಸಿ ಹರೀಶ್ ರವರು ಪುತ್ತೂರಿನ ಕಾಂಪ್ಲೆಕ್ಸ್ ಒಂದರಲ್ಲಿ ವಾಹನಗಳ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಹೇಮಂತ್ ಆಚಾರ್ಯ ಎಂಬವರು ಹರೀಶ್ ರವರಿಗೆ ಸುಮಾರು ಒಂದು ತಿಂಗಳಿನಿಂದ ವಿನಾಃ ಕಾರಣ ಬೈಯ್ಯುವುದು ಮಾನಸಿಕ ಕಿರುಕುಳ ನೀಡುತ್ತಿದ್ದು, ಕಳೆದ ಕೆಲ ದಿನಗಳ ಹಿಂದೆ ಹರೀಶ್ ರವರಿಗೆ ಹೇಮಂತ್ ಹಲ್ಲೆ ಮಾಡಿ, ತಲ್ವಾರು ಹಿಡಿದು ಜೀವ ಬೆದರಿಕೆ ಹಾಕಿರುತ್ತಾರೆ. ಈ ವಿಷಯ ಹರೀಶ್ ರವರು ಅವರ ಮಗಳಿಗೆ ತಿಳಿಸಿದ್ದು, ಹೇಮಂತ್ ಕಿರುಕುಳ ಹಾಗು ಹಲ್ಲೆಯಿಂದ ನೊಂದುಕೊಂಡಿದ್ದ ಹರೀಶ್ ರವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂಬುದಾಗಿ ಮೃತ ಹರೀಶ್ ರವರ ಮಗಳು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಹರೀಶ್ ರವರ ಅಸ್ವಾಭಾವಿಕ ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದೆ.









