ಪಾಣಾಜೆಯಲ್ಲಿ ಮಕ್ಕಳ ಹಕ್ಕುಗಳ ಮಾಹಿತಿ ಕಾರ್ಯಾಗಾರ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ

0

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ ಕ ಜಿಲ್ಲೆ ಇದರ ಆಶ್ರಯದಲ್ಲಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವಿವೇಕ್ ಆಂಗ್ಲ ಮಾಧ್ಯಮ ಶಾಲೆ ಪಾಣಾಜೆ ಇವರ ಸಹಕಾರದೊಂದಿಗೆ ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ಪ್ರಯುಕ್ತ ಮಕ್ಕಳ ಹಕ್ಕುಗಳ ಮಾಹಿತಿ ಕಾರ್ಯಾಗಾರ ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಜಾಥಾವು ನ.21 ರಂದು ಪಾಣಾಜೆ ವಿವೇಕ್ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಜರಗಿತು.

ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ಜಿಲ್ಲಾಧ್ಯಕ್ಷ ಮುಹಮ್ಮದ್ ರಫೀಕ್ ದರ್ಬೆ ಅಧ್ಯಕ್ಷತೆಯನ್ನು ವಹಿಸಿದರು. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮೂನತುಲ್ ಮೆಹ್ರಾ ಕರಪತ್ರ ಬಿಡುಗಡೆ ಮಾಡುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು.

ಮಕ್ಕಳ ಹಕ್ಕುಗಳ ಜಾಗೃತಿ ಜಾಥಾವನ್ನು ವಿವೇಕ್ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಶಾಹುಲ್ ಹಮೀದ್ ಜಾಲಗದ್ದೆ ಉದ್ಘಾಟಿಸಿದರು. ಪುತ್ತೂರು ಮಹಿಳಾ ಠಾಣೆಯ ಎ ಎಸ್ ಐ ರಾಮಚಂದ್ರ ಮತ್ತು ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಪಾಣಾಜೆ ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ನಾಯಕ್, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಯನ ರೈ, ಮಕ್ಕಳ ಮಾಸೋತ್ಸವ ಸಮಿತಿ ಉಪ ಸಂಚಾಲಕಿ ಸುಮಂಗಳ ಶೆಣೈ, ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ರೋಹಿಣಿ ರಾಘವ ಆಚಾರ್ಯ , ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು, ಪಾಣಾಜೆ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಉಮ್ಮರ್ ಜನಪ್ರಿಯ, ವಿವೇಕ್ ಆಂಗ್ಲ ಮಾಧ್ಯಮ ಶಾಲೆ ರಕ್ಷಕ ಶಿಕ್ಷಕ ಸಮಿತಿ ಅಧ್ಯಕ್ಷ ಅಬೂಬಕರ್ ಇಬ್ರಾಹಿಂ, ಕವಿತಾ ದಿನಕರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಹಾಜಿ.ಯಸ್.ಅಬೂಬಕ್ಕರ್ ಆರ್ಲಪದವು ಸ್ವಾಗತಿಸಿ, ಶಾಲಾ ಮುಖ್ಯಗುರು ಸುನೀತಿ. ಪಿ ವಂದಿಸಿದರು. ಶಾಲಾ ಶಿಕ್ಷಕಿ ರವಿ ಶೋಭಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿ ಸಹ ಶಿಕ್ಷಕರು ಸಹಕರಿಸಿದರು.

LEAVE A REPLY

Please enter your comment!
Please enter your name here