ಪುತ್ತೂರು:ಹಲ್ಲೆ ಪ್ರಕರಣವೊಂದರಲ್ಲಿ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ವಾರಂಟ್ ಜಾರಿ ಬಳಿಕ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
6 ವರ್ಷಗಳ ಹಿಂದೆ ಕೊಂಬೆಟ್ಟಿನಲ್ಲಿ ಶರತ್ ರೈ ಎಂಬವರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಲ್ನಾಡು ಉಜಿರುಪಾದೆ ವಿನೋದ್ ಬಿ. ವಿರುದ್ಧ ಪ್ರಕರಣ ದಾಖಲಾಗಿತ್ತು.ಬಳಿಕ ಆರೋಪಿ ವಿನೋದ್ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ಬಂಧನಕ್ಕೆ ವಾರಂಟ್ ಮಾಡಿತ್ತು.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಆರೋಪಿ ಪರ ವಕೀಲರಾದ ಮಾಧವ ಪೂಜಾರಿ, ರಾಕೇಶ್ ಬಲ್ನಾಡು, ನಿಶಾ ಕುಮಾರಿ ವಾದಿಸಿದ್ದರು.
