ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ನ.21ರಂದು ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದ ಅಟರ್ನೆಸ್ 2K25 ಪಿಯು ಫೆಸ್ಟ್ ಸಂಪನ್ನಗೊಂಡಿತು.

18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮದ ಉದ್ಘಾಟನೆ ಮಾಡಿ ಶುಭ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಮಾರೋಪ ಸಮಾರಂಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಬಡ್ಡಿ ತರಬೇತುದಾರರಾದ ಪ್ರಶಾಂತ್ ರೈ ಕೈಕಾರ, ಇವರ ಕ್ರೀಡಾ ಸಾಧನೆಗೆ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ಅವರು ಶಿಕ್ಷಣದ ಜೊತೆಗೆ ಶಿಕ್ಷಣೇತರ ಚಟುವಟಿಕೆಗಳಲ್ಲಿ ಭಾಗವಹಿಸಿ, ದೈಹಿಕ ಮತ್ತು ಮಾನಸಿಕ ಅರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.
ಇನ್ನೊರ್ವ ಅತಿಥಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಹಶಿಕ್ಷಕರು ಲಿಟ್ಲ್ ಪ್ಲವರ್ ಶಾಲೆಯ ಬಾಲಕೃಷ್ಣ ರೈ ಪೋರ್ದಲ್ ಅವರ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗೆ ಗೌರವಿಸಿ ಸಮ್ಮಾನ ಮಾಡಲಾಗಿ ಅಕ್ಷಯ ಸಂಸ್ಥೆಯು ಬೆಳೆದು ಬಂದ ಹಾದಿ ಮತ್ತು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಕುರಿತು ಮಾತನಾಡಿ ಎಲ್ಲರಿಗೂ ಸಂಸ್ಥೆ ಮಾದರಿ ಎಂದು ಹೇಳಿದರು.
ಸಮಾರಂಭದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಜಯಂತ ನಡುಬೈಲ್ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ದೊರಕುವಂತೆ ಮಾಡುವ ಉದ್ದೇಶದಿಂದ ವಿದೇಶಗಳಿಗೆ ಇಂಟರ್ನ್ಶಿಪ್ಗೆ ತೆರಳುವ ವ್ಯವಸ್ಥೆಯನ್ನು ಕಾಲೇಜು ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ವೃತ್ತಿಪರ ಶಿಕ್ಷಣದ ಮಹತ್ವವನ್ನು ವಿವರಿಸಿದರು ಹಾಗೂ ಭಾಗವಹಿಸಿದ ಎಲ್ಲಾ ಕಾಲೇಜುಗಳಿಗೆ ಹಾಗೂ ಉಪನ್ಯಾಸ ವೃಂದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.
ವೇದಿಕೆಯಲ್ಲಿ ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಗಂಗಾರತ್ನ, ಕಾಲೇಜು ನಾಯಕ ರಾಕೇಶ್ ತೃತೀಯ ಐ.ಡಿ ಉಪಸ್ಥಿತರಿದ್ದರು.
ಅಟರ್ನೆಸ್ 2K25 ಸಮಗ್ರ ಪ್ರಶಸ್ತಿ : ಎನ್.ಎಮ್.ಪಿ.ಯು ಕಾಲೇಜು ಸುಳ್ಯ.
ಪ್ರಥಮ ರನ್ನರ್ ಆಪ್ ಪ್ರಶಸ್ತಿ : ಎಸ್. ಡಿ. ಎಮ್ ಕಾಲೇಜು ಉಜಿರೆ.
ದ್ವಿತೀಯ ರನ್ನರ್ ಆಪ್ ಪ್ರಶಸ್ತಿ :ಕೆ. ಎಸ್ ಗೌಡ ಕಾಲೇಜು ನಿಂತಿಕಲ್ಲು.
ಸೂಪರ್ ಸ್ಟಾರ್ ಪ್ರಶಸ್ತಿ: ಎಲ್ಲಾ ಸ್ಪರ್ಧೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳ ಭಾಗವಹಿಸುವಿಕೆ.: ಎನ್.ಎಮ್.ಪಿ.ಯು ಕಾಲೇಜು ಸುಳ್ಯ.
ಪದವಿ ಕಾಲೇಜಿನ ಪ್ರಾಚಾರ್ಯ ಸಂಪತ್ ಪಕ್ಕಳ ಸ್ವಾಗತಿಸಿ, ಉಪನ್ಯಾಸಕಿಯರಾದ ಕಾವ್ಯಶ್ರೀ ಮತ್ತು ದೀಕ್ಷಾ ರೈ ವಂದಿಸಿ,ಶೃತ ಮತ್ತು ರಶ್ಮಿ ಕಾರ್ಯಕ್ರಮ ನಿರ್ವಹಿಸಿದರು.