ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಕಡಬದ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಡ್ಕ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಕೆಗೆ ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಪೂರಕ ಸಹಾಯಧನವನ್ನು ಮಂಜೂರು ಮಾಡಿರುತ್ತಾರೆ.

ಸಿಲಿಕಾನ್ ಚೇಂಬರ್ ಖರೀದಿಗೆ 1,53,630/- ರೂ. ಮಂಜೂರುಗೊಂಡಿದ್ದು,ಮಂಜೂರಾತಿ ಪತ್ರವನ್ನು ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮನಾ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ್ ಎ ಅವರಿಗೆ ಹಸ್ತಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಿರಣ್ ಗೊಗಟೆ, ಮಹಮ್ಮದ್ ಅಲಿ, ಸುಧೀರ್ ದೇವಾಡಿಗ, ಲಕ್ಷ್ಮೀಶ ಬಂಗೇರ, ಕುಟ್ರುಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಶಿವಪ್ರಸಾದ್ ಪುತ್ತಿಲ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಡಬ ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್, ವಾಲ್ಯ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್, ವಾಲ್ಯ, ಬಲ್ಯ, ದೇರಾಜೆ, ಕುಟ್ರುಪಾಡಿ ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳಾದ ದುರ್ಗಾವತಿ, ಪುಷ್ಪಲತಾ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.