ಬಡಗನ್ನೂರು: ಉರ್ವ ಗಾಂಧಿನಗರ ದ.ಕ.ಜಿ.ಪಂ.ಉ.ಹಿ.ಪ್ರಾಥಮಿಕ ಶಾಲಾ ಮಕ್ಕಳ ಶೖೆಕ್ಷಣಿಕ ಪ್ರವಾಸ ಅಂಗವಾಗಿ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆನ. 22ರಂದು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಕ್ಷೇತ್ರಾಡಳಿತ ಸಮಿತಿ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಉಪಾಧ್ಯಕ್ಷ ದೀಪಕ್ ಕೋಟ್ಯಾನ್ ಗುರುಪುರ, ನಾರಾಯಣ ಮಚ್ಚಿನ, ಹಾಗೂ ಶಾಲಾ ಅಧ್ಯಾಪಕ ವೖಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.