





ಕಾಣಿಯೂರು: ಕುದ್ಮಾರು ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಮಹಾ ಚಂಡಿಕಾ ಹೋಮವು ನ.23ರಂದು ನಡೆಯಿತು. ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಪ್ರಾರ್ಥನೆ, ಪುಣ್ಯಾಹ, ಚಂಡಿಕಾಯಾಗ ನಡೆಯಿತು. ಮಧ್ಯಾಹ್ನ ಚಂಡಿಕಾ ಯಾಗದ ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

















