ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ದ.ಕ ಸಹಯೋಗದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪುತ್ತೂರು ಆಯೋಜಿಸಿದ ದಕ್ಷಿಣ ಕನ್ನಡ ಪ ಪೂ.ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಅಪೂರ್ವ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ವೈಭವ್ ವಿ. ಕೆ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ದ್ವಿತೀಯ ಹಾಗೂ ಜನಪದ ನೃತ್ಯದಲ್ಲಿ ಪ್ರಥಮ ವಿಜ್ಞಾನ ವಿಭಾಗದ ನಿಶಾ ಪಿ ಎಸ್ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.
