





ಪುತ್ತೂರು: ಸರ್ವೆ ಕಲ್ಪಣೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಪ್ರತಿಭಾ ಸ್ಪರ್ಶ’ ನ.21ರಂದು ನಡೆಯಿತು. ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್.ಎಸ್.ಡಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನರಿಮೊಗರು ಕ್ಲಸ್ಟರ್ನ ಸಿಆರ್ಪಿ ಪರಮೇಶ್ವರಿ ಅವರು ಪ್ರತಿಭಾ ಕಾರಂಜಿ ಕುರಿತು ಮಾತನಾಡಿದರು. ಇಲಾಖೆಯ ಪರವಾಗಿ ಪ್ರಾಥಮಿಕ ವಿಭಾಗದ ಬಿಆರ್ಪಿ ನಾಗೇಶ್ ಪಾಟಾಳಿ ಮಾತನಾಡಿದರು. ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ್ ಎನ್ಎಸ್ಡಿ ಅಧ್ಯಕ್ಷೀಯ ಮಾತುಗಳನ್ನಾಡಿದರು.



ಮುಂಡೂರು ಗ್ರಾ.ಪಂ ಸದಸ್ಯರಾದ ಕರುಣಾಕರ ಗೌಡ ಎಲಿಯ ಮತ್ತು ಶ್ರೀಮತಿ ರಸಿಕ ರೈ ಮೇಗಿನಗುತ್ತು, ಇಲಾಖೆಯ ವತಿಯಿಂದ ಇಸಿಒ ಅಮೃತ ಕಲಾ ಹಾಗೂ ಬಿಆರ್ಪಿಗಳಾದ ರತ್ನಕುಮಾರಿ, ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲಾ ನಿವೃತ್ತ ಮುಖ್ಯ ಗುರು ಮಹಾಬಲ ರೈ, ಸರ್ವೆ ಎಸ್ಜಿಎಂ ಪ್ರೌಢ ಶಾಲಾ ನಿವೃತ್ತ ಮುಖ್ಯಗುರು ಶ್ರೀನಿವಾಸ್ ಎಚ್.ಬಿ, ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಕಲ್ಪಣೆ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ಸಿದ್ದೀಕ್ ಸುಲ್ತಾನ್, ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಧಾಕೃಷ್ಣ ರೈ ರೆಂಜಲಾಡಿ, ಪತ್ರಕರ್ತ ಯೂಸುಫ್ ರೆಂಜಲಾಡಿ ಮತ್ತು ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆಯ ಸಿಬ್ಬಂದಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಕ್ತಕೋಡಿ ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕಿ ಗೀತಾ ಹಾಗೂ ಇಡ್ಯೊಟ್ಟು ಪ್ರಾಥಮಿಕ ಶಾಲೆಯಿಂದ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕಿ ಪ್ರೇಮ ಅವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ಅನಿತಾ ಶೆಟ್ಟಿ ಅವರು ಸನ್ಮಾನಿಸಲ್ಪಟ್ಟ ನಿವೃತ್ತ ಮುಖ್ಯ ಗುರುಗಳ ಪರಿಚಯ ಮಾಡಿದರು.





ಶಾಲೆಗೆ ರೂ. 55೦೦೦ ನಗದು ನೀಡಿ ಸಹಕರಿಸಿದ ಜೋಸ್ ಆಲುಕ್ಕಾಸ್ ಚಿನ್ನದ ಮಳಿಗೆಯ ಮ್ಯಾನೇಜರ್ ಹಾಗೂ ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಶಿಕ್ಷಕಿ ಉಮಾವತಿ ಅವರು ಜೋಸ್ ಆಲುಕ್ಕಾಸ್ ಸಂಸ್ಥೆಯ ಪರಿಚಯ ಮಾಡಿದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯ ಗುರು ಕಮಲಾ ವಂದಿಸಿದರು. ಶಿಕ್ಷಕಿ ಜ್ಯೋತಿ ಸಿ.ಜಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸತೀಶ್ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದರು. ಎಸ್ಡಿಎಂಸಿ ಉಪಾಧ್ಯಕ್ಷೆ ಮೀನಾಕ್ಷಿ ಸೊರಕೆ ಹಾಗೂ ಎಸ್ಡಿಎಂಸಿ ಸದಸ್ಯರು, ಪೋಷಕರು ಸಹಕರಿಸಿದರು. ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.









