ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಹೊಸಮಠ ಪ್ರಾ.ಕೃ.ಪ.ಸ.ಸಂಘಕ್ಕೆ ಭೇಟಿ-ಸಹಾಯಧನ ಚೆಕ್ ಹಸ್ತಾಂತರ

0

ಕಡಬ: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಅವರು ನ.24ರಂದು ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ ನೀಡಿ, ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವತಿಯಿಂದ ನೀಡಲಾದ ರೂ. 7 ಲಕ್ಷದ ಸಹಾಯಧನದ ಚೆಕ್‌ನ್ನು ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗರವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್ ರೈ ಬಾಲ್ಯೋಟ್ಟು ಅವರು ಸಂಘದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾರಣಕರ್ತರಾದ ಸರ್ವರನ್ನು ಅಭಿನಂದಿಸಿ ಸಂಘವು ಇನ್ನಷ್ಟು ಅಭಿವೃದ್ದಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಬಾಲ್ಯೋಟ್ಟು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೃಷ್ಣಪ್ಪ ದೇವಾಡಿಗ ಸನಿಲ, ಉಪಾಧ್ಯಕ್ಷ ಚಿದಾನಂದ ಕೊಡೆಂಕಿರಿ, ನಿರ್ದೇಶಕರಾದ ಶಿವಪ್ರಸಾದ್ ಪುತ್ತಿಲ, ಜಯಚಂದ್ರ ರೈ ಕುಂಟೋಡಿ, ಶಶಾಂಕ್ ಗೋಖಲೆ ಎಂ., ಶ್ರೀಧರ ಎಸ್.ಎನ್. ಶಿವಪ್ರಸಾದ್ ರೈ ಮೈಲೇರಿ, ಅಚ್ಯುತ ದೇರಾಜೆ, ಪಕೀರ, ಯೋಗೇಂದ್ರ ಕುಮಾರ್, ಬಿ.ಎಸ್., ಲೀಲಾವತಿ ಕೆ. ಶಕಿಲ, ವಲಯ ಮೇಲ್ವಿಚಾರಕ ಪ್ರದೀಪ್ ಕೆ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿ ಎಂ.ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here