





ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆಯು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ದಿವೀಶ್ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಡಿಸೆಂಬರ್ 14 ಮತ್ತು 15 ರಂದು ನಡೆಯುವ ಪ್ರಗತಿ ವಿದ್ಯಾಸಂಸ್ಥೆಗಳ ವಾರ್ಷಿಕೋತ್ಸವದ ಕುರಿತು ಚರ್ಚಿಸಲಾಯಿತು.


ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷರಾದ ದಿವೀಶ್ ಮುರುಳ್ಯ ಅವರು ಮಾತನಾಡಿ, ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸಕ್ರಿಯ ಭಾಗವಹಿಸುವಿಕೆ ಅಗತ್ಯ ಎಂದರಲ್ಲದೆ ಎಲ್ಲರ ಸಹಕಾರವನ್ನು ಕೋರಿದರು.ಶಿಕ್ಷಕ-ರಕ್ಷಕ ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ವಾರ್ಷಿಕ ಕ್ರೀಡಾಕೂಟ, ಪೋಷಕರ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಬಗ್ಗೆ ಚರ್ಚಿಸಿ ಸೂಕ್ತ ಸಲಹೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷೆಯಾಗಿ ಸುವರ್ಣ ಉಡುಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.






ವೇದಿಕೆಯಲ್ಲಿ ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ, ಸಹ ಆಡಳಿತಾಧಿಕಾರಿ ಹೇಮಾನಾಗೇಶ್ ರೈ, ಮುಖ್ಯ ಗುರುಗಳಾದ ನಾರಾಯಣ ಭಟ್, ವಿನಯ ವಿ ಶೆಟ್ಟಿ, ಆಂಗ್ಲ ಮಾಧ್ಯಮದ ಸಹ ಮುಖ್ಯಸ್ಥೆ ಅನಿತಾ ಜೆ ರೈ ಉಪಸ್ಥಿತರಿದ್ದರು.










