ಬಡಗನ್ನೂರು ವಲಯ ಮಟ್ಟದ ವಾರ್ಷಿಕೋತ್ಸವ ಮತ್ತು ಭಜನೋತ್ಸವ ಪೂರ್ವಭಾವಿ ಸಭೆ

0

ಬಡಗನ್ನೂರು: ಅರಿಯಡ್ಕ ವಲಯ ಮಟ್ಟದ ವಾರ್ಷಿಕೋತ್ಸವ ಮತ್ತು ಭಜನೋತ್ಸವ ಪೂರ್ವಭಾವಿ ಸಭೆಯು ವಲಯಾಧ್ಯಕ್ಷ ದಿನೇಶ್ ರೖೆ ಕುತ್ಯಾಳ ಇವರ ಅಧ್ಯಕ್ಷತೆಯಲ್ಲಿ ನ.24ರಂದು ಪಡುಮಲೆ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ವಲಯ ಮೇಲ್ವಿಚಾರಕ ಹರೀಶ್ ಕುಲಾಲ್ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಭಜನಾ ಪರಿಷತಿನ ಅಧ್ಯಕ್ಷ ಗಂಗಾಧರ ರೈ ಎಂ.ಜಿ ಸುಳ್ಯಪದವು, ಬಡಗಗನ್ನೂರು ಬಿ ಒಕ್ಕೂಟದ ಅಧ್ಯಕ್ಷ ಸುಬ್ಬಯ್ಯ ರೈ ಹಲಸಿನಡಿ, ಪಟ್ಟೆ ಎ ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ ಮೋಡಿಕೆ, ಪಡುಮಲೆ ಶ್ರೀ ಕೂವೆ ಶಾಸ್ತಾರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ತಿಲು, ವರಮಹಾಲಕ್ಮಿ ಪೂಜಾ ಸಮಿತಿ ಅಧ್ಯಕ್ಷೆ ವಾಣಿಶ್ರೀ ಪಡುಮಲೆ, ವಲಯ ಭಜನಾ ಮಂಡಳಿಯ ಪದಾಧಿಕಾರಿಗಳು ಒಕ್ಕೂಟ ಪದಾಧಿಕಾರಿಗಳು, ವಲಯ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಬಡಗನ್ನೂರು ಒಕ್ಕೂಟದ ಸೇವಾಪ್ರತಿನಿಧಿ ಸಾವಿತ್ರಿ  ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here