ಪುತ್ತೂರು: ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ನ. 22 ರಂದು ಪುತ್ತೂರು ಬಂಟರ ಭವನದಲ್ಲಿ ಜರಗಿದ ಬಂಟೆರೆ ಸೇರಿಗೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 13 ಮಂದಿಗೆ ಚಿನ್ನದ ಪದಕ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅವರುಗಳಲ್ಲಿ ಬೂಡಿಯಾರ್ ಮಹಿಳಾ ಕೃಷಿ ಪ್ರಶಸ್ತಿಯನ್ನು ದಯಾ ವಿ.ರೈ ಕೇಕನಾಜೆ( ಪ್ರಾಯೋಜಕರು- ಬೂಡಿಯಾರ್ ಗುಲಾಬಿ ಎಂ. ಚೌಟ ಮತ್ತು ಮಕ್ಕಳು), ಪಿಯುಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾ ಅರಿಯಡ್ಕ ಪ್ರಶಸ್ತಿಯನ್ನು ವರ್ಷಿಣಿ ಆಳ್ವರವರಿಗೆ( ಪ್ರಾಯೋಜಕರು ಅರಿಯಡ್ಕ ಚಿಕ್ಕಪ್ಪ ನಾೖಕ್), ಎಸ್ಎಸ್ಎಲ್ಸಿ ವಿಭಾಗದ ಪ್ರತಿಭಾನ್ವಿತ ವಿದ್ಯಾ ಚನಿಲ ಪ್ರಶಸ್ತಿಯನ್ನು ಅನ್ವಿತಾ ರೈಯವರಿಗೆ ( ಪ್ರಾಯೋಜಕರು- ಚನಿಲ ತಿಮ್ಮಪ್ಪ ಶೆಟ್ಟಿ) ನೀಡಲಾಯಿತು
ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಉದ್ಯಮಿಗಳಾದ ಡಾ| ಕೂಳೂರು ಕನ್ಯಾನ ಸದಾಶಿವ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಮಾಜಿ ಸಚಿವ ರಮಾನಾಥ ರೈ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ ಪತ್ನಿ ಸುಮಾ ಅಶೋಕ್ ಕುಮಾರ್ ರೈ, ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ ಹಾಗೂ ಕೋಶಾಽಕಾರಿ ಸಂತೋಷ್ ಕುಮಾರ್ ಶೆಟ್ಟಿ ಸಾಜರವರು ಉಪಸ್ಥಿತರಿದ್ದರು.
