





ಪುತ್ತೂರು: ವೇಗವಾಗಿ ಬೆಳೆಯುತ್ತಿರುವ ಔದ್ಯೋಗಿಕ ರಂಗದಲ್ಲಿ ದಿನದಿಂದ ದಿನಕ್ಕೆ ಹಲವಾರು ಬದಲಾವಣೆಗಳಾಗುತ್ತಿರುತ್ತವೆ.ಅದಕ್ಕಾಗಿ ನಮ್ಮ ಭವಿಷ್ಯದ ದೃಷ್ಟಿಯಿಂದ ವಿದ್ಯಾರ್ಥಿ ದೆಸೆಯಿಂದಲೇ ಚಿಂತನೆ ಮಾಡಬೇಕಾಗಿದೆ.ಸವಾಲುಗಳು ಎದುರಾದಷ್ಟು ಮನುಷ್ಯ ಮತ್ತಷ್ಟು ಬಲಗೊಳ್ಳುತ್ತಾನೆ ಸಮಸ್ಯೆಗಳನ್ನು ಮೀರಿ ನಿಲ್ಲಲು ನಮಗೆ ಬೇಕಿರುವುದು ಉತ್ತೇಜನ.ಶ್ರದ್ಧೆಯಿಂದ ಅಧ್ಯಯನ ಮಾಡಿ ಯಶಸ್ಸು ಸಾಧಿಸಿ ಎಂದು ಶ್ರೀ ರಾಮಕೃಷ್ಣ ಪ್ರೌಢಶಾಲೆ ಪುತ್ತೂರು ಇದರ ಮುಖ್ಯೋಪಾಧ್ಯಾಯರಾದ ಗಾಯತ್ರಿ ಎಸ್. ರವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2025 ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರಾದ ಪ್ರಶಾಂತ್ ಭಟ್ ರವರು ಮಾತನಾಡುತ್ತಾ ಪ್ರತಿಯೊಬ್ಬರು ತಮ್ಮ ಚಿಂತನೆಗಳಿಗೆ ಒಂದು ಚೌಕಟ್ಟನ್ನು ಹಾಕಿಕೊಂಡು ಅದರೊಳಗೆ ಬಂಧಿಯಾಗಿರುತ್ತಾರೆ.ಆ ಚೌಕಟ್ಟಿನಿಂದ ಹೊರಬಂದು ವಿಭಿನ್ನವಾಗಿ ಚಿಂತಿಸಿದಾಗ ಮಾತ್ರ ವ್ಯಕ್ತಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ.ನಾವು ಬದಲಾದಾಗ ಮಾತ್ರ ಸಮಾಜದ ವ್ಯವಸ್ಥೆಯು ಉನ್ನತಿಯತ್ತ ಸಾಗುತ್ತದೆ.ಎಂದು ಹೇಳಿದರು.





ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಮೋಹಿನಿ ದಿವಾಕರ ರವರು ಮಾತನಾಡುತ್ತಾ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಮೊದಲು ಆ ಬಗೆಗೆ ನಿರ್ಧಿಷ್ಟವಾದ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು.ಗುರಿಯ ದಿಕ್ಕಿನಲ್ಲಿ ಶ್ರಮವಹಿಸಿದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ.ವ್ಯಕ್ತಿತ್ವ ವಿಕಸದ ಜೊತೆಗೆ ಸುಸ್ಥಿರ ಸಮಾಜದ ನಿರ್ಮಾಣಕ್ಕೆ ಅಗತ್ಯವಾದ ಕ್ರಿಯಾಶೀಲ ಯುವಕರನ್ನು ನಮ್ಮೆಲ್ಲಾ ಸಂಸ್ಥೆಗಳು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದೆ ಎಂದು ಹೇಳಿದರು.
ಭೌತಶಾಸ್ತ್ರ , ರಸಾಯನ ಶಾಸ್ತ್ರ, ಜೀವಶಾಸ್ತ್ರ ಮತ್ತು ಇತರ ವಿಜ್ಞಾನ ಪ್ರಯೋಗಗಳ ವೀಕ್ಷಣೆ ಕಾಲೇಜಿನ ಪ್ರಯೋಗಾಲಯಗಳಲ್ಲಿ ನಡೆಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಅರ್ಚನಾ ಸ್ವಾಗತಿಸಿ, ಸಹನಾ ವಂದಿಸಿದರು.










