





ಪುತ್ತೂರು; ದ ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರೀಸ್ ಆಫ್ ಇಂಡಿಯಾ(ICSI) ನಡೆಸುವ CSEET ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತನ್ವಿ ಭಟ್ ಉತ್ತೀರ್ಣರಾಗಿರುತ್ತಾರೆ. ಇವರು ಬೆಂಗಳೂರಿನ ಅನಂತ ಪದ್ಮನಾಭ ಭಟ್ ಹಾಗೂ ಸ್ಮಿತಾ ಭಟ್ ದಂಪತಿಗಳ ಪುತ್ರಿ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.











