ನಿಡ್ಪಳ್ಳಿ; ಕರ್ನಪ್ಪಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ವಠಾರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀಕೊಡಮಣಿತ್ತಾಯ ದೈವಸ್ಥಾನದ ಪ್ರತಿಷ್ಠಾ ಕೆಲಸ ಕಾರ್ಯಗಳ ಬಗ್ಗೆ ಮತ್ತು ಸಮಿತಿ ಹಂಚಿಕೆಯ ಬಗ್ಗೆ ಹಾಗೂ ಮುಂದಿನ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ನ.25ರ ಇಂದು ಸಂಜೆ ಗಂಟೆ 6.00ಕ್ಕೆ ಸರಿಯಾಗಿ ಕರ್ನಪ್ಪಾಡಿ ಗರಡಿ ವಠಾದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು, ಸಂಚಾಲಕರುಗಳು ಹಾಗೂ ಎಲ್ಲಾ ಸದಸ್ಯರು ಮತ್ತು ಎಲ್ಲಾ ಸಮಾಜ ಬಾಂಧವರು ತಪ್ಪದೇ ಭಾಗವಹಿಸ ಬೇಕೆಂದು ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ ಪದಡ್ಕ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.