





ಪುತ್ತೂರು: ನ.26 ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದು, ಪುತ್ತೂರಿನಲ್ಲಿ ಭಾರತ ಸಂವಿಧಾನ ಜಾಗೃತಿ ಜಾಥ ನಡೆಯಿತು.



ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಮತ್ತು ಸಂವಿಧಾನ ಪೀಠಿಕೆಯೊಂದಿಗಿನ ಜಾಗೃತಿ ಜಾಥಾಕ್ಕೆ ದರ್ಬೆಯಲ್ಲಿ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಲಾಯಿತು.






ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ಅಮಳ ರಾಮಚಂದ್ರ, ತಹಶೀಲ್ದಾರ್ ನಾಗರಾಜ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣು್ಪ್ರಸಾದ್, ನಗರಸಭೆ ಪೌರಾಯುಕ್ತೆ ವಿದ್ಯಾ ಎಮ್ ಕಾಳೆ, ಶಿಕ್ಷಣ ಸಂಯೋಜಕ ಹರಿಪ್ರಸಾದ್, ಬಿ ಕೆ ಅಣ್ಣಪ್ಪ ಕಾರೆಕ್ಕಾಡು, ಬಾಬು ಸವಣೂರು, ಅಬ್ದುಲ್ ಹಮೀದ್ ಸಾಲ್ಮರ, ಹಕೀಂ ಸಹಿತ ಹಲವಾರು ಮಂದಿ ಈ ಸಂದರ್ಭ ಉಪಸ್ಥಿತರಿದ್ದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡರು.









