ಪುತ್ತೂರು; ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.26ರಂದು ನಡೆಯಲಿರುವ ಕಿರುಷಷ್ಠಿ ಮಹೋತ್ಸವ ವರ್ಷಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯು ನ.26ರಂದು ಶ್ರೀಕ್ಷೇತ್ರದಲ್ಲಿ ನಡೆದ ಷಷ್ಠಿ ಮಹೋತ್ಸವದಲ್ಲಿ ಬಿಡುಗಡೆಗೊಂಡಿತು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬುಡಿಯಾರ್ ರಾಧಾಕೃಷ್ಣ ರೈ, ಕಾರ್ಯಾಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸದಸ್ಯರಾದ ಪ್ರಜ್ವಲ್ ರೈ ತೊಟ್ಲ, ಪವಿತ್ರ ರೈ ಬಿ., ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.
