ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಮೃತ್ಯು : ತಂದೆಯಿಂದ ದೂರು ; ಪ್ರಕರಣ ದಾಖಲು

0

ಕಡಬ: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಕಡಬದ ಕುಟ್ರುಪ್ಪಾಡಿ ಗ್ರಾಮದ ಉಳಿಪ್ಪು ನಿವಾಸಿ ರಾಕೇಶ್ ಕೆ.ಎಸ್ (36ವ) ಮೃತರು.

ಮೃತ ರಾಕೇಶ್ ಅವರ ತಂದೆ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್‌ ನಂ: 35/2025 ಕಲಂ:194 (3) (iv) BNSS-2023 ರಂತೆ ಪ್ರಕರಣ ದಾಖಲಾಗಿದೆ.

ದೂರಿನಲ್ಲೇನಿದೆ?
ಕಡಬ, ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ ಎಂಬವರ ಪುತ್ರ ರಾಕೇಶ್‌ (36ವ) ಕಡಬದ ಕಳಾರ ಎಂಬಲ್ಲಿ ದ್ವಿಚಕ್ರ ವಾಹನಗಳ ಗ್ಯಾರೇಜ್ ಇಟ್ಟುಕೊಂಡಿದ್ದು, ಆತನ ಪತ್ನಿಯೊಂದಿಗೆ ಆತನ ಗೆಳೆಯನೊಬ್ಬ ಮೊಬೈಲ್ ಪೋನ್ ಮೂಲಕ ಸಂಪರ್ಕದಲ್ಲಿರುವ ವಿಷಯ ತಿಳಿದ ರಾಕೇಶ್ ತೀವ್ರವಾಗಿ ಬೇಸರಗೊಂಡು ನ.19ರಂದು ಸಂಜೆ, ಕಡಬದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅಲ್ಲಿದ್ದವರು ರಾಕೇಶ್‌ ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ರಾಕೇಶ್ ನ.26ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಈ ಬಗ್ಗೆ ನ.26 ರಂದು ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್‌ ನಂ: 35/2025 ಕಲಂ:194 (3) (iv) BNSS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here