





ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಕೋಲಾರ ಮತ್ತು ಸೈಂಟ್ ಫ್ರಾನ್ಸಿಸ್ ದೀ ಸೇಲ್ಸ್ ಕಾಲೇಜ್ ತಮಕ, ಕೋಲಾರ ಇದರ ಸಹಯೋಗದಲ್ಲಿ ನ.25ರಂದು ಎಸ್ಎಫ್ಎಸ್ ಕಾಲೇಜು ಕೋಲಾರದಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟ 2025-26’ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಚಿನ್ನದ ಪದಕವನ್ನು ಪಡೆದುಕೊಂಡು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ಇವರಿಗೆ ಅಶ್ವತ್ ಕೆ.ಎಸ್ ತರಬೇತಿ ನೀಡಿರುತ್ತಾರೆ. ಇವರು ಆರ್ಯಾಪು ನಿವಾಸಿ ಬಾಬು ಮರಿಕೆ ಹಾಗೂ ಪವಿತ್ರ ದಂಪತಿಗಳ ಪುತ್ರ. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.















