
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 28 ಹಾಗೂ 29 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಡಿ.28ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿಟ್ಲ ಶೋಕ ಮಾತಾ ದೇವಾಲಯ ಇಲ್ಲಿನ ಧರ್ಮ ಗುರುಗಳಾದ ಅತೀ. ವಂ. ಫಾ ಐವನ್ ಮೈಕಲ್ ರೋಡ್ರಿಗಸ್ ವಹಿಸಲಿದ್ದಾರೆ. ನ.29ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಂತ ಫಿಲೋಮಿನಾ ಪದವಿ (ಸ್ವಾಯತ್ತ) ನಿವೃತ್ತ ಪ್ರಾಂಶುಪಾಲರಾದ ಪ್ರೊ. ಲಿಯೋ ನೋರೋನ್ನ ವಹಿಸಲಿದ್ದಾರೆ.
ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್. ಡಿ ಕೋಸ್ಟಾ ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ದಿವ್ಯಾ ಅನಿಲ್ ರೈ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೀಪ್ತಿ ಕೆ ಸಿ, ಕಾರ್ಯದರ್ಶಿ ತೇಜಸ್ ಎ ಕೆ. ಹಾಗೂ ಜೊತೆ ಕಾರ್ಯದರ್ಶಿ ಶ್ರೀಯಾ ಎ ಜಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.