ನರೇಂದ್ರ ಪ.ಪೂ.ಕಾಲೇಜಿನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ‍್ಯಾಗಾರ ಪ್ರೇರಣಾ 2025

0

ಪುತ್ತೂರು: ಅಂತಃಶಕ್ತಿಯನ್ನು ಅರಿತುಕೊಳ್ಳುವ ಮೂಲಕ ಹೊಸ ಅಸ್ತಿತ್ವವನ್ನು ಸ್ಥಾಪಿಸಬೇಕು.ಅಂತರಂಗ ಶುದ್ಧವಾಗಿದ್ದರೆ ಮನಸ್ಸು ಕ್ರಿಯಾಶೀಲವಾಗಿರುತ್ತದೆ.ರಾಷ್ಟ್ರ ಪ್ರೇಮದಂತಹ ಉದಾತ್ತ ಆಲೋಚನೆಗಳಿಗೆ ಬದುಕನ್ನು ಬದಲಿಸುವ ಶಕ್ತಿಯಿದೆ.ಎಲ್ಲರೂ ದಿನನಿತ್ಯ ಒಂದೊಂದು ಗುಣಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಆಲೋಚನೆಗಳಿಂದ ಜೀವನದ ಯಾವುದೇ ಸವಾಲನ್ನು ಧೈರ್ಯವಾಗಿ ಎದುರಿಸಬಹುದು.ಎಂದು ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪುಷ್ಪಾವತಿ ಎಸ್. ರವರು ಹೇಳಿದರು.


ನರೇಂದ್ರ ಪ.ಪೂ.ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಪ್ರೇರಣಾ – 2025ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕಿ ಶಶಿಕಲಾ ಮಾತನಾಡುತ್ತಾ,ಸಕಾರಾತ್ಮಕ ಪ್ರತಿಕ್ರಿಯೆಯು ವಿದ್ಯಾರ್ಥಿಗಳಲ್ಲಿ ಸಾಧನೆಯ ಪ್ರಜ್ಞೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.ಕಾರ್ಯಕ್ರಮಗಳನ್ನು ಆಯೋಜಿಸುವುದು, ತಂಡದ ಕೆಲಸ, ಸಮಯ ನಿರ್ವಹಣೆ ಮತ್ತು ನಾಯಕತ್ವ ಸೇರಿದಂತೆ ವಿವಿಧ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಇಂತಹ ಕಾರ‍್ಯಾಗಾರಗಳು ಅವಕಾಶವನ್ನು ಒದಗಿಸುತ್ತದೆ.ಈ ಸಮಯದಲ್ಲಿ ಅಭಿವೃದ್ಧಿಪಡಿಸಿದ ಕೌಶಲ್ಯಗಳು ಅವರ ವೈಯಕ್ತಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಸಹಾಯ ಮಾಡುತ್ತವೆ.ಎಂದು ಹೇಳಿದರು.


ವಿದ್ಯಾರ್ಥಿಗಳಿಗೆ ಆಕರ್ಷಕ ಮೋಜಿನ ಆಟಗಳನ್ನು ಕಾಲೇಜಿನ ವಿದ್ಯಾರ್ಥಿಗಳು ಆಡಿಸಿದರು.ಭೌತಶಾಸ್ತ್ರ ,ರಸಾಯನ ಶಾಸ್ತ್ರ, ಜೀವಶಾಸ್ತ್ರ ಮತ್ತುಇತರ ವಿಜ್ಞಾನ ಪ್ರಯೋಗಗಳ ವೀಕ್ಷಣೆ ಕಾಲೇಜಿನ ಪ್ರಯೋಗಾಲಯಗಳಲ್ಲಿ ನಡೆಯಿತು. ಈ ಕಾರ್ಯಾಗಾರಕೆ ಅಭೂತ ಪೂರ್ವ ಸ್ಪಂದನೆ ವ್ಯಕ್ತವಾಯಿತು.ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.ಪ್ರತೀ ವರ್ಷವುಇಂತಹ ಅವಕಾಶ ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿ ಎಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಅರ್ಚನಾ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here