ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಯಂ.ಗೋಪಾಲಕೃಷ್ಣ ಪಡ್ಡಿಲ್ಲಾಯ ಆಯ್ಕೆ

0


ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಯಂ.ಗೋಪಾಲಕೃಷ್ಣ ಪಡ್ಡಿಲ್ಲಾಯ ರವರು ಆಯ್ಕೆಯಾಗಿದ್ದಾರೆ.

ನ.23 ರಂದು ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ.ಸುಬ್ರಹ್ಮಣ್ಯ ರಾವ್ ಅಧ್ಯಕ್ಷತೆಯಲ್ಲಿ ಮತ್ತು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಡಾ.ಹೇಮಂತ್ ರೈ ಮನವಳಿಕೆಗುತ್ತು ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯಂ.ಗೋಪಾಲಕೃಷ್ಣ ಪಡ್ಡಿಲ್ಲಾಯ ರವರನ್ನು ಆಯ್ಕೆ ಮಾಡಲಾಗಿದೆ.


ಯಂ.ಗೋಪಾಲಕೃಷ್ಣ ಪಡ್ಡಿಲ್ಲಾಯ ರವರು 2005 ರಿಂದ 2011 ರ ತನಕ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ,2007 ರಲ್ಲಿ ಶರವೂರಿನ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ನೇತೃತ್ವವನ್ನು ಕೂಡ ವಹಿಸಿದ್ದರು.

ಉದ್ಯಮಿಯಾಗಿರುವ ಯಂ ಗೋಪಾಲಕೃಷ್ಣ ಪಡ್ಡಿಲ್ಲಾಯ ರವರು ಆಲಂಕಾರಿನ ದೇವಿಪ್ರಸಾದ್ ಹಾರ್ಡ್ ವೇರ್ ನ ಮಾಲಕರಾಗಿ ಅನೇಕ ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮುಖಂಡರಾಗಿ, ಆಲಂಕಾರು ಆಯ್ಯಪ್ಪ ಭಜನಾ ಮಂದಿರದ ಗೌರವ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು ಆಲಂಕಾರು ಗ್ರಾಮದ ತೋಟಂತ್ತಿಲ ಎಂಬಲ್ಲಿ ವಾಸವಾಗಿದ್ದಾರೆ.

LEAVE A REPLY

Please enter your comment!
Please enter your name here