ಪುತ್ತೂರು: ವೀರಮಂಗಲ ಪಿ.ಎಂ.ಶ್ರೀ ಸ.ಹಿ.ಪ್ರಾ ಶಾಲೆಯಲ್ಲಿ ನ.27ರಂದು ಸಂವಿಧಾನ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂವಿಧಾನದ ಪೀಠಿಕೆ ಆಶಯವನ್ನು ಶಾಲಾ ಶಿಕ್ಷಕಿ ಸೌಮ್ಯ ವಿವರಿಸಿದರು. ಸಂವಿಧಾನ ದಿನಾಚರಣೆಯ ಹಿನ್ನೆಲೆ ಹಾಗೂ ಪ್ರಾಮುಖ್ಯತೆ, ಡಾ.ಬಿ ಆರ್. ಅಂಬೇಡ್ಕರ್ ರವರ ಕೊಡುಗೆಯ ಬಗ್ಗೆ ತಿಳಿಸಿದರು. ಶಾಲಾ ಮುಖ್ಯ ಗುರುಗಳಾದ ತಾರಾನಾಥ ಪಿ. ಇವರು ಸಂವಿಧಾನದ ಅರ್ಥ, ಅಗತ್ಯತೆ ಬಗ್ಗೆ ವಿವರಿಸಿದರು. ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಮಾಹಿತಿ ನೀಡಿದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಇವರ ಭಾವಚಿತ್ರಕ್ಕೆ ಗೌರವಾರ್ಪಣೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
