ಪ್ರಧಾನ ಕಾರ್ಯದರ್ಶಿಗಳ ಕೈ ಬಿಟ್ಟ ಬಿಜೆಪಿ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

0

ಪುತ್ತೂರು: ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದು ಬಿಜೆಪಿಯಲ್ಲಿ ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಇಬ್ಬರು ಮತ್ತು ನಗರ ಮಂಡಲದ ಪ್ರಧಾನ ಕಾರ್ಯದರ್ಶಿಯೊಬ್ಬರನ್ನು ಬದಲಾಯಿಸಿದ ಬೆನ್ನಲ್ಲೇ ಮೂವರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ದಕ್ಷಿಣ ಕನ್ನಡ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.


ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದಲ್ಲಿ ಉಮೇಶ್ ಕೋಡಿಬೈಲು ಮತ್ತು ಪ್ರಶಾಂತ್ ನೆಕ್ಕಿಲಾಡಿ ಅವರು ಹಾಗು ನಗರ ಮಂಡಲದಲ್ಲಿ ಅನಿಲ್ ತೆಂಕಿಲ ಅವರು ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರನ್ನು ಬದಲಾಯಿಸಿ ಬಿಜೆಪಿ ಅವರ ಸ್ಥಾನಕ್ಕೆ ಬೇರೆ ಹೊಸ ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿಗೊಳಿಸಿದ ಬೆನ್ನಲ್ಲೇ ಪುತಿಲ ಪರಿವಾರ ಸೇವಾ ಟ್ರಸ್ಟ್‌ನಲ್ಲಿ ಉಮೇಶ್ ಕೋಡಿಬೈಲು ಅವರನ್ನು ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ, ಅನಿಲ್ ತೆಂಕಿಲ ಮತ್ತು ಪ್ರಶಾಂತ್ ನೆಕ್ಕಿಲಾಡಿ ಅವರನ್ನು ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಸಂಚಾಲಕರು ನಿಯುಕ್ತಿಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here