ಡಿ.2ರಂದು ಅಭಿನಂದನೆ -ಬೀಳ್ಕೊಡುಗೆ ಸಮಾರಂಭ
ಪುತ್ತೂರು : ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಿರಿಜಾ ಕೆ. ಅವರು ನ.30ರಂದು ಸೇವಾ ನಿವೃತ್ತಿಯಾಗಲಿದ್ದಾರೆ.
ಇವರಿಗೆ ಸಂಘದ ವತಿಯಿಂದ ಸಂಘದ ರೈತಸ್ನೇಹಿ ಸಭಾಂಗಣ ಪೆರ್ಲಂಪಾಡಿಯಲ್ಲಿ ಡಿ.2ರಂದು ಅಭಿನಂದನೆ ಮತ್ತು ಬೀಳ್ಕೊಡುಗೆ ಸಮಾರಂಭ ನಡೆಯಲಿದೆ.
ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ತೀರ್ಥಾನಂದ ದುಗ್ಗಳ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಗಿರಿಜಾ ಕೆ.ಅವರನ್ನು ಸನ್ಮಾನಿಸುವರು.
ಮುಖ್ಯ ಅತಿಥಿಗಳಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳಜ್ಜ,ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷೆ ಅಕ್ಕಮ್ಮ,ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ರಘು ಎಸ್.ಎಂ.,ಕೊಳ್ತಿಗೆ ಪ್ರಾ.ಕೃ.ಸ.ಸಂಘದ ಸ್ಥಾಪಕಾಧ್ಯಕ್ಷ ನಾರಾಯಣ ರೈ ಪಾಲ್ತಾಡು,ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಂಗಾಧರ ಗೌಡ ಕೆಮ್ಮಾರ,ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷರಾದ ವೆಂಕಟರಮಣ ಕೆ.ಎಸ್., ವಸಂತ ಕುಮಾರ್ ರೈ ದುಗ್ಗಳ ಪಾಲ್ಗೊಳ್ಳಲಿದ್ದಾರೆ.
ಕೊಳ್ತಿಗೆ ಪ್ರಾ.ಕೃ.ಪ.ಸ.ಸಂಘದ ಮಾಜಿ ಉಪಾಧ್ಯಕ್ಷ ಗಣೇಶ್ ಭಟ್ ಮಾಪಲಮಜಲು,ಕೊಳ್ತಿಗೆ ರೈತ ಮಿತ್ರ ಕೂಟದ ಅಧ್ಯಕ್ಷ ಮುರಳೀಧರ ಎಸ್.ಪಿ.ಕೆಮ್ಮಾರ, ನವೋದಯ ಸ್ವಸಹಾಯ ಸಂಘಗಳ ಪ್ರೇರಕಿ ಕಲ್ಪವಲ್ಲಿ,ನವೋದಯ ಸ್ವಸಹಾಯ ಸಂಘಗಳ ಕೊಳ್ತಿಗೆ ಒಕ್ಕೂಟದ ಅಧ್ಯಕ್ಷ ಅಶೋಕ್ ಒರ್ಕೊಂಬು,ಪಾಲ್ತಾಡಿ ಒಕ್ಕೂಟದ ಅಧ್ಯಕ್ಷೆ ಸುನಂದ ಪಲ್ಲತಡ್ಕ ಗೌರವ ಉಪಸ್ಥಿತರಿರುವರು ಎಂದು ಸಂಘದ ಅಧ್ಯಕ್ಷ ತೀರ್ಥಾನಂದ ದುಗ್ಗಳ, ಉಪಾಧ್ಯಕ್ಷ ಜನಾರ್ದನ ಗೌಡ ಪಿ.,ಸಹ ಕಾರ್ಯನಿರ್ವಹಣಾಧಿಕಾರಿ ಬಾಲಗಂಗಾಧರ ಕೆ.ತಿಳಿಸಿದ್ದಾರೆ.
