





ಸವಣೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರದ ಪ್ರಯುಕ್ತ ವಾರ್ಷಿಕ ಕ್ರೀಡಾಕೂಟವನ್ನುನಡೆಸಲಾಯಿತು.


ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಸತೀಶ್ ಕುಮಾರ್ ರೈ ಗೌರವವಂದನೆಯನ್ನು ಸ್ವೀಕರಿಸಿ ದೀಪ ಪ್ರಜ್ವಲನೆಯ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆ ಇಷ್ಟೊಂದು ಅದ್ಭುತವಾಗಿ ಕ್ರೀಡಾಕೂಟವನ್ನು ಆಯೋಜನೆ ಮಾಡಿರುವಂತದ್ದು ಅತ್ಯಂತ ಶ್ಲಾಘನೀಯ. ವಿದ್ಯಾರ್ಥಿಗಳ ಶಿಸ್ತಿನ ಪಥಸಂಚಲನ ಅತ್ಯಂತ ಆಕರ್ಷಣೀಯ ವಾಗಿತ್ತು. ಖಾಸಗಿ ವಿದ್ಯಾ ಸಂಸ್ಥೆಗಳಿಗಿಂತ ಯಾವ ಮೂಲ ಸೌಲಭ್ಯದ ಕೊರತೆ ಈ ಸಂಸ್ಥೆಯಲ್ಲಿ ಕಾಣದಷ್ಟು ಉತ್ತಮವಾಗಿದೆ ಸಂಸ್ಥೆ ಎಂದು ಹೇಳಿ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು.






ಎಲ್ಲಾ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರ ಮೂಲಕ ನಿಮ್ಮ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಸದೃಢ ಶರೀರದಲ್ಲಿ ಸದೃಢ ಮನಸ್ಸನ್ನು ಗಟ್ಟಿಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು. ಇಂದು ಸರಕಾರ ಕ್ರೀಡಾಪಟುಗಳಿಗೆ ಸಾಕಷ್ಟು ಉದ್ಯೋಗ ಅವಕಾಶವನ್ನು ನೀಡುತ್ತಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಸೈನ್ಸ್ ಒಲಂಪಿಯಾಡ್ ಫೌಂಡೇಶನ್ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಸಾಧನೆಗಾಗಿ ಡಿಸ್ಟಿಕ್ ಬೆಸ್ಟ್ ಪ್ರಿನ್ಸಿಪಾಲ್ ಅವಾರ್ಡ್ ಗೆ ಭಾಜನರಾದ ಪ್ರಶಸ್ತಿ ಪುರಸ್ಕೃತರಾದ ಸತೀಶ್ ಕುಮಾರ್ ಅವರನ್ನು ಸಂಸ್ಥೆಯ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸವಣೂರು ಗ್ರಾಮ ಪಂಚಾಯಿತಿ ಸನ್ಮಾನ್ಯ ಅಧ್ಯಕ್ಷೆ ಸುಂದರಿ ಬಿ.ಎಸ್. ಮಾತನಾಡಿ ಕ್ರೀಡಾಕೂಟದ ಯಶಸ್ವಿನ ಹಿಂದೆ ಕೈಜೋಡಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಾಧ್ಯಕ್ಷರಾಗಿ ಗಿರಿಶಂಕರ ಸುಲಾಯ, ಪಂಚಾಯತ್ ಸದಸ್ಯರಾದ ಚಂದ್ರವತಿ ಸುಣ್ಣಾಜೆ, ಬಾಬು, ರಾಜೀವಿ ಶೆಟ್ಟಿ, ಕಟ್ಟಡ ಸಮಿತಿಯ ಅಧ್ಯಕ್ಷ ಕೃಷ್ಣಕುಮಾರ್ ರೈ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಕಡಬ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು, ಜಿಲ್ಲಾ ಯುವಜನ ಒಕ್ಕೂಟದ ಜಿಲ್ಲಾಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು, ಉಪಸ್ಥಿತರಿದ್ದರು.
ಕ್ರೀಡಾಕೂಟದ ಧ್ವಜಾರೋಹಣವನ್ನು ಸಂಸ್ಥೆಯ ಪ್ರಾಂಶುಪಾಲೆ ಪದ್ಮಾವತಿ ಎನ್ ಪಿ. ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಗುರು ರೀನಾ ಎಂ ಡಿ ವಂದಿಸಿದರು. ಕುಮಾರಿ ಚಿಸ್ಮಿತ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಸಿಂಚನ ಮತ್ತು ತಂಡ ಪ್ರಾರ್ಥಿಸಿ ದೈಹಿಕ ಶಿಕ್ಷಣ ಶಿಕ್ಷಕರು ಮಾಮಚನ್ ಎಂ ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ಹಾಗೂ ಪದವಿ ಪೂರ್ವ ವಿಭಾಗದ ವಿಭಾಗದ ಉಪನ್ಯಾಸಕರು ಬೋಧಕೇತರ ಸಿಬ್ಬಂದಿಗಳು ಸಹಕರಿಸಿದರು.








