ನ.30: ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ಅರಿಯಡ್ಕ ಉತ್ಸವ – ಶಾಸಕರ ಅನುದಾನಗಳ ಅನಾವರಣ-ಸನ್ಮಾನ ಕಾರ್ಯಕ್ರಮ

0

ಪುತ್ತೂರು: ಅರಿಯಡ್ಕ ವಲಯ ಕಾಂಗ್ರೆಸ್ ವತಿಯಿಂದ ಅರಿಯಡ್ಕ ಉತ್ಸವ-2025 ವಿನೂತನ ಕಾರ್ಯಕ್ರಮ ನ.30ರಂದು ಕೌಡಿಚ್ಚಾರ್ ಜಂಕ್ಷನ್‌ನಲ್ಲಿ ನಡೆಯಲಿದೆ.

ಅರಿಯಡ್ಕ ವಲಯ ಅರಣ್ಯ ಸಮಿತಿ ಮಾಜಿ ಅಧ್ಯಕ್ಷರಾದ ರಾಜೀವ್ ರೈ ಕುತ್ಯಾಡಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದು ಶಾಸಕ ಅಶೋಕ್ ಕುಮಾರ್ ರೈ ಅವರು ಅಧ್ಯಕ್ಷತೆ ವಹಿಸಿ ಅನುದಾನಗಳ ಅನಾವರಣ ಕಾರ್ಯಕ್ರಮ ನೆರವೇರಿಸಲಿದ್ದಾರೆ.

ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಆರ್ ಪೂಜಾರಿ ಹಾಗೂ ಎಂ.ಎಸ್ ಮುಹಮ್ಮದ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎಚ್ ಮಹಮ್ಮದ್ ಆಲಿ, ಅಕ್ರಮ-ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು, ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಜಿ.ಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ನ್ಯಾಯವಾದಿ ದುರ್ಗಾಪ್ರಸಾದ್ ರೈ ಕುಂಬ್ರ, ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕಗಳ ಅಧ್ಯಕ್ಷ ಅಬ್ದುಲ್ ರಹಿಮಾನ್ ಆಜಾದ್, ಎಸ್.ಸಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು, ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಚಂದ್ರಪ್ರಭಾ ಗೌಡ, ನೆ.ಮುಡ್ನೂರು ಗ್ರಾ.ಪಂ ನಿಟಕಪೂರ್ವ ಉಪಾಧ್ಯಕ್ಷ ಶ್ರೀರಾಮ್ ಪಕ್ಕಳ, ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಸಹಿತ ಪಕ್ಷದ ನಾಯಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರು ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಅರಿಯಡ್ಕ ಗ್ರಾ.ಪಂ ವ್ಯಾಪ್ತಿಗೆ ನೀಡಿರುವ ಅನುದಾನಗಳ ಅನಾವರಣ ಕಾರ್ಯಕ್ರಮ ನಡೆಯಲಿದ್ದು ಪಕ್ಷದ ಹಿರಿಯ ಕಾರ್ಯಕರ್ತರಿಗೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಕೂಡಾ ನಡೆಯಲಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಉಪಹಾರ ಮತ್ತು ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗುತ್ತದೆ. ಅರಿಯಡ್ಕ ಉತ್ಸವದಲ್ಲಿ ಗ್ರಾಮಸ್ಥರು, ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here