ಭಾರತ್ ಸ್ಪೆಷಲ್ ಒಲಿಂಪಿಕ್ಸ್ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟ: ಕಡಬ ಮರ್ಧಾಳದ ಬೆಥನಿ ಜೀವನ್ ಜ್ಯೋತಿ ವಿಶೇಷ ಶಾಲೆಯ ಮಹೇಶ್ ಗೆ ಚಿನ್ನ

0

ಕಡಬ: ಭಾರತ್ ಸ್ಪೆಷಲ್ ಒಲಿಂಪಿಕ್ಸ್ ಕೊಲ್ಕತ್ತಾದಲ್ಲಿ ನಡೆದ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುವ, ಕಡಬ ಮರ್ಧಾಳ ಬೆಥನಿ ಜೀವನ ಜ್ಯೋತಿ ವಿಶೇಷ ಶಾಲೆಯ ವಿದ್ಯಾರ್ಥಿ ಮಹೇಶ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಕ ಮಣಿಕಂಠ ಇವರು ತರಬೇತಿಯನ್ನು ನೀಡಿರುತ್ತಾರೆ. ಮಹೇಶ್ ರವರು ಕಡಬದ ಅಡ್ಡಗದ್ದೆ ಕೆರೆಮುದೇಲು ನಿವಾಸಿ, ಮೋನಪ್ಪ ಗೌಡ ಹಾಗೂ ಚಂದ್ರಾವತಿ ದಂಪತಿಯ ಪುತ್ರ.

ಶಾಲೆಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಸಂಸ್ಥೆಯ ನಿರ್ದೇಶಕ ವಂ. ಫಾದರ್ ಸಕ್ಕರಿಯಾಸ್ ನಂದಿಯಾಟ್ ಓಐಸಿಯವರು, “ಈ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲಿ” ಎಂದು ಹಾರೈಸಿದರು. ಮುಖ್ಯಗುರು ಶೈಲಾ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here