ಪುತ್ತೂರು:ವರ್ಷದ ಹಿಂದೆ ನಡೆದ ಅಪಘಾತವೊಂದರಲ್ಲಿ ಸ್ಕೂಟರ್ ಸವಾರನ ಸಾವಿಗೆ ಕಾರಣವಾದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಪಿಕಪ್ ಚಾಲಕನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿದೆ.
2024ರ ಆ.18ರಂದು ಬೆಳಿಗ್ಗೆ ಮಾಡ್ನೂರು ಗ್ರಾಮದ ಕಾವು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ಪಿಕಪ್(ಕೆಎ-21:ಸಿ 5940)ಮತ್ತು ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮೋಟಾರ್ ಸೈಕಲ್(ಕೆಎ-21:ಇಇ 1444)ನಡುವೆ ಡಿಕ್ಕಿ ಸಂಭವಿಸಿತ್ತು.ಪರಿಣಾಮ ಸ್ಕೂಟರ್ ಸವಾರ ಸುರೇಶ್ ಬಿ.ಎಂಬವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದರು.
ಘಟನೆಗೆ ಸಂಬಂಧಿಸಿ ಪಿಕಪ್ ಚಾಲಕ ನಿತಿನ್ ಎಂಬವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪೊಲೀಸ್ ಉಪನಿರೀಕ್ಷಕರಾಗಿದ್ದ ರವಿ ಬಿ.ಎಸ್.ಅವರು ಆರೋಪಿ ವಿರುದ್ಧ ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ದೇವರಾಜ್‌ರವರು ಆರೋಪಿಯನ್ನು ಖುಲಾಸೆಗೊಳಿಸಿ ನ.27ರಂದು ತೀರ್ಪು ನೀಡಿದ್ದಾರೆ.ಆರೋಪಿಯ ಪರವಾಗಿ ಸುಳ್ಯದ ವಕೀಲರಾದ ಎಂ.ವೆಂಕಪ್ಪ ಗೌಡ, ಚಂಪಾ ವಿ ಗೌಡ, ರಾಜೇಶ್ ಬಿ.ಜಿ ಹಾಗೂ ಶ್ಯಾಮ್‌ಪ್ರಸಾದ್ ನಿಡ್ಯಮಲೆ ವಾದಿಸಿದ್ದರು.