ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಸೇವೆ
ಪುತ್ತೂರು: ಪುತ್ತೂರಿಗೆ 300 ಬೆಡ್ ನ ಮೆಡಿಕಲ್ ಕಾಲೇಜಿಗೆ ಅಧಿಕೃತ ಆದೇಶ ಸರಕಾರದಿಂದ ಬಂದ ಹಿನ್ನಲೆ ಮತ್ತು ಮೂರು ಬೇಡಿಕೆಗಳ ಈಡೇರಿಕೆ ಆಗಿರುವ ಹಿನ್ನಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಮತ್ತು ಪ್ರಾಕಾರ ಗುಡಿಗಳಿಗೆ ಪೂಜೆ ಸೇವೆ ಹಾಗು ಮಹಿಷಮರ್ದಿನಿ ದೇವಸ್ಥಾನದಲ್ಲಿ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ಚ, ಕೆ ಪಿ ಸಿ ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಶಿವರಾಮ ಆಳ್ವ , ಪುತ್ತೂರು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥನೆ ಮಾಡಿದರು.ಸರ್ವಧರ್ಮ ಧಾರ್ಮಿಕ ಸ್ಥಳಗಳಲ್ಲೂ ಪ್ರಾರ್ಥನೆ ನೆರವೇರಿಸಿದರು.
