ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿಗೆ 300 ಬೆಡ್ ನ ಮೆಡಿಕಲ್ ಕಾಲೇಜಿಗೆ ಅಧಿಕೃತ ಆದೇಶ ಸರಕಾರದಿಂದ ಬಂದ ಹಿನ್ನಲೆ ಮತ್ತು ಮೂರು ಬೇಡಿಕೆಗಳ ಈಡೇರಿಕೆ ಆಗಿರುವ ಹಿನ್ನಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಮತ್ತು ಪ್ರಾಕಾರ ಗುಡಿಗಳಿಗೆ ಪೂಜೆ ಸೇವೆ ಹಾಗು ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಪೂಜೆ, ಪುತ್ತೂರು ಕೇಂದ್ರ ಜುಮಾ ಮಸೀದಿ ಹಾಗೂ ಪುತ್ತೂರು ಮಾಯಿದೆ ದೇವುಸ್ ಚರ್ಚ್‌ಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಶಾಸಕರ ಜೊತೆ ಪಂಜಿಗುಡ್ಡೆ ಈಶ್ವರ ಭಟ್, ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ , ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್ , ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ,ಉಮಾನಾಥ ಶೆಟ್ಟಿ ಪೆರ್ನೆ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀದರ್ ರೈ ಮಟಂತಬೆಟ್ಟು, ಪ್ರಮುಖರಾದ ಸುದೇಶ್ ಶೆಟ್ಟಿ, ಶಿವರಾಮ ಆಳ್ವ, ರವಿಪ್ರಸಾದ್ ಶೆಟ್ಟಿ ಬನ್ನೂರು, , ರೋಶನ್ ರೈ ಬನ್ನೂರು, ಫಾರೂಕ್ ಬಾಯಬ್ಬೆ, ನೂರುದ್ದೀನ್ ಸಾಲ್ಮರ, ಅಬ್ದುಲ್ ರಹಿಮಾನ್ ಆಝಾದ್, ಸಿಯಾನ್ ದರ್ಬೆ, ವಿನಯ್ , ಶರೂನ್ ಸಿಕ್ವೆರಾ, ಲ್ಯಾನ್ಸಿ ಮಸ್ಕರೇನಸ್, ಪುತ್ತೂರು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಸೇರಿದಂತೆ ಪ್ರಮುಖರು ಇದ್ದರು.