ಮೈಸೂರಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಪುತ್ತೂರಿನ ಬಾಲ ಪ್ರತಿಭೆ ಸೋನಿಕಾ ಜನಾರ್ದನ್‌ರಿಂದ ಕನ್ನಡ ಗೀತ ಗಾಯನ

0

ಪುತ್ತೂರು: ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಮೈಸೂರು ವಕೀಲರ ಸಂಘ ಇವರ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ಧನ್ ಕನ್ನಡ ಗೀತೆ ಯನ್ನು ಹಾಡುವುದರ ಮೂಲಕ ನೆರೆದವರ ಮೆಚ್ಚುಗೆಗೆ ಪಾತ್ರಳಾದರು.

ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯ ಧೀಶರಾದ ಉಷರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಮೈಸೂರು ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಹಿರಿಯ ಕಮಿಟಿ ಸದಸ್ಯರಾದ ಶಿವಸ್ವಾಮಿ, ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಧೀಶರುಗಳು, ವಕೀಲರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು, ಝೀ ಕನ್ನಡ ಸ.ರಿ.ಗ.ಮ.ಪ ಖ್ಯಾತಿಯ ಕಲಾವಿದ ಪುರುಷೋತ್ತಮ್ ಮತ್ತು ತಂಡದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here