ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇದರ ಆಶ್ರಯದಲ್ಲಿ ಶ್ರೀ ನಾರಾಯಣ ಗುರು ಪ. ಪೂ. ಕಾಲೇಜು ಮುಲ್ಕಿಯಲ್ಲಿ ನವೆಂಬರ್ 18 ರಂದು ನಡೆದ ಜಿಲ್ಲಾಮಟ್ಟದ ಟೆನ್ನಿಕ್ವಾಯಿಟ್ ಪಂದ್ಯಾಟ – 2025 ರಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಅಲೆನ್.ಪಿ. ಜಾನ್
ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು ಬೆಂಗಳೂರು ನಿವಾಸಿ ಪ್ರಸಾದ್ ತೋಮಸ್ ಮತ್ತು ಅನಿಶಾ ಜಾನ್ ದಂಪತಿಗಳ ಪುತ್ರ.ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
