ಕಡಬ: ಇಲ್ಲಿನ ಜೆ.ಎಂ.ಜೆ ಆಸ್ಪತ್ರೆಯಲ್ಲಿ ಡಿ.1ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಆದರ್ಶ್ ಅವರು ಎಚ್ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆಯ ಬಗ್ಗೆ ಮಾತನಾಡಿ, ಸಮಾಜದಲ್ಲಿ ಸರಿಯಾದ ಅರಿವು ಮೂಡಿಸುವುದು ಅಗತ್ಯ ಆಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ ಸಿಸ್ಟರ್ ರೋಸ್ಲಿ, ಹಾಗೂ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ತಂಡ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಏಡ್ಸ್ ತಡೆಗಟ್ಟುವ ಕ್ರಮಗಳು, ಸಹಾನುಭೂತಿ ಮತ್ತು ಸಮಾನತೆ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿ, ವಂದನಾರ್ಪಣೆ ನಡೆಯಿತು.
