ಬಡಗನ್ನೂರು : ದ್ವಾರಕ ಪ್ರತಿಷ್ಠಾನ( ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಗೀತಾ ಜಯಂತಿ ಉತ್ಸವವನ್ನು ಡಿ. 1 ರಂದು ಆಚರಿಸಲಾಯಿತು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ದೀಪ ಪ್ರಜ್ವಲಿಸಿ, ಭಗವಾನ್ ಶ್ರೀ ಕೃಷ್ಣ ಪರಮಾತ್ಮನಿಗೆ ಪುಷ್ಪಾರ್ಚನೆ ಮಾಡಿದರು. ಬಳಿಕ ಭಗವಾನ್ ಶ್ರೀ ಕೃಷ್ಣನಿಗೆ ಮತ್ತು ಭಗವದ್ಗೀತೆಗೆ ಮಂಗಲ ನೀರಾಜನ ನೆರವೇರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಶ್ರೀಮದ್ ಭಗವದ್ಗೀತಾ ಪಾರಾಯಣ ನಡೆಯಿತು.
ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಬಾಲಕೃಷ್ಣ ಭಟ್ ಕೇಕನಣಾಜೆ ಸುಮಾರು 45 ನಿಮಿಷಗಳ ಕಾಲ ಗೀತಾರ್ಥ ಮಂಥನ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪದೇಶಿಸಿದರು.
ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರು ಬಾಲಕೃಷ್ಣ ಭಟ್ ಕೇಕಣಾಜೆಯವರಿಗೆ ಸ್ಮರಣೆಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಗಣರಾಜ್ ಕುಂಬ್ಳೆ, ಸಂಸ್ಥೆಗಳ ಸಂಚಾಲಕ ವಿಘ್ನೇಶ ಹಿರಣ್ಯ, ಪ್ರೌಢಶಾಲಾ ವಿಭಾಗದ ಮುಖ್ಯ ಗುರು ಸುಮನ , ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಗುರು ರಾಜಗೋಪಾಲ್.ಎನ್ ಉಪಸ್ಥಿತರಿದ್ದರು. ಶಿಕ್ಷಕಿಯಾರದ ಪ್ರಜ್ಞ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
