




ಪುತ್ತೂರು: 2025ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆರವರಿಗೆ ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸನ್ಮಾನ ಕಾರ್ಯಕ್ರಮ ಡಿ.2 ರಂದು ತಾಲೂಕು ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿನ ಕಛೇರಿಯಲ್ಲಿ ನೆರವೇರಿತು.




ಬ್ರಹ್ಮಶ್ರೀ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆರವರನ್ನು ಶಾಲು ಹೊದಿಸಿ ಸನ್ಮಾನಿಸಿ ಶುಭ ಹಾರೈಸಿದರು. ಸನ್ಮಾನಿತ ವಿಜಯಕುಮಾರ್ ಸೊರಕೆರವರು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯರಾಗಿ, ಪುತ್ತೂರು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರಾಗಿ, ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಮಾಜಿ ಅಧ್ಯಕ್ಷರಾಗಿ, ನರಿಮೊಗರು ಮೂರ್ತೆದಾರರ ಸೊಸೈಟಿಯ ನಿಕಟಪೂರ್ವ ಅಧ್ಯಕ್ಷರಾಗಿ, ಕುದ್ರೋಳಿ ಗೋಕರ್ಣನಾಥೇಶ್ವರ ಬ್ಯಾಂಕಿನ ನಿರ್ದೇಶಕರಾಗಿ, ದ.ಕ ಜಿಲ್ಲಾ ಮಟ್ಟದ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪುರಸ್ಕೃತರಾಗಿರುತ್ತಾರೆ.





ಸನ್ಮಾನ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಆನಂದ ಎಸ್.ಡಿ, ನಿರ್ದೇಶಕರಾದ ರವಿ ಕಲ್ಕಾರು, ಕೆ.ಪಿ ದಿವಾಕರ್, ಉಮೇಶ್ ಬರಮೇಲು, ಬೇಬಿ, ಕಾರ್ಯನಿರ್ವಹಣಾಧಿಕಾರಿ ಅಕ್ಷಿತಾರವರು ಉಪಸ್ಥಿತರಿದ್ದರು.






