




ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿಕೊಂಡು ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೋಕ್ಸೋ ಕಾಯ್ದೆ ದಾಖಲಿಸಿಕೊಂಡು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಪೆರಿಯಡ್ಕ ನಿವಾಸಿ ಮುಹಮ್ಮದ್ ಮುಸ್ತಾಫ (40) ಬಂಧಿತ ಆರೋಪಿ.



ಈತ ಕಳೆದ ಎರಡು ತಿಂಗಳಿನಿಂದ ಈ ಬಾಲಕಿಯನ್ನು ಬಸ್ ನಿಲ್ದಾಣದಿಂದ ಹಿಂಬಾಲಿಸುತ್ತಿದ್ದು, ಕಳೆದ ತಿಂಗಳ 29ನೇ ತಾರೀಕಿನಂದು ಬಾಲಕಿಯನ್ನು ಈತ ಈತನ ಮನೆಗೆ ಕರೆದಿದ್ದಾನೆ ಎಂದು ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ. ಈತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.





ಕಳೆದ ನವೆಂಬರ್‌ನಲ್ಲಿ ಅನಾರೋಗ್ಯದಿಂದ ವಿಶ್ರಾಂತಿಯಲ್ಲಿದ್ದ ಸಹಪಾಠಿ ಹಿಂದೂ ವಿದ್ಯಾರ್ಥಿಯೋರ್ವನನ್ನು ನೋಡಲು ತೆರಳಿದ್ದ ಅನ್ಯ ಕೋಮಿನ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣದಲ್ಲಿಯೂ ಈತ ಆರೋಪಿಯಾಗಿದ್ದಾನೆ.









