ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ
ಮುಕ್ಕೂರು : ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋ ಅನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಮಂಗಳವಾರ ಕುಂಜಾಡಿ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ಜ.10 ಮತ್ತು ಜ.11 ರಂದು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ ವೇಳೆ ಆಯೋಜನೆಗೆ ಪೂರಕವಾಗಿ ನಳಿನ್ ಕುಮಾರ್ ಕಟೀಲು ಅವರು ಸಲಹೆ ಸೂಚನೆ ನೀಡಿದರು. ದಶಪ್ರಣತಿ, ಶಾಶ್ವತ ಯೋಜನೆಗಳ ಬಗ್ಗೆ ವಿಸ್ತ್ರತ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ನೇಸರ ದಶಪ್ರಣತಿ ಸಮಿತಿ ಅಧ್ಯಕ್ಷ ಡಾ.ಕಾನಾವು ನರಸಿಂಹ ಶರ್ಮ ಹಾಗೂ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು ಅವರು ಉದ್ದೇಶಿತ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ದಶಪ್ರಣತಿ ಕ್ರೀಡಾಕೂಟದ ಯಶಸ್ಸಿನ ಬಗ್ಗೆಯು ಮಾಜಿ ಸಂಸದರು ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಕ್ಕೂರು ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ ಕಾನಾವು, ಸದಸ್ಯರಾದ ಜಯಂತ ಕುಂಡಡ್ಕ, ರವಿ ಕುಂಡಡ್ಕ, ಶ್ರೀಧರ ಗೌಡ ಕೊಂಡೆಪ್ಪಾಡಿ, ಪ್ರವೀಣ್ ಬೋಳಕುಮೇರು, ವಸಂತ ಕುಂಡಡ್ಕ, ರವೀಂದ್ರ ಅನವುಗುಂಡಿ, ಶೀನ ಅನವುಗುಂಡಿ ಮೊದಲಾದವರು ಉಪಸ್ಥಿತರಿದ್ದರು.
