ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ನಿಡ್ಪಳ್ಳಿ; ಪಾಣಾಜೆ ಸುಬೋಧ ಪ್ರೌಢಶಾಲೆಯ ವಾರ್ಷಿಕ ಕ್ರೀಡೋತ್ಸವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಉಪೇಂದ್ರ ಬಲ್ಯಾಯ ದೇವಸ್ಯರವರ ಅಧ್ಯಕ್ಷತೆಯಲ್ಲಿ ಡಿ.2 ರಂದು ನಡೆಯಿತು.

ಶಾಲಾ ಹಿರಿಯ ವಿದ್ಯಾರ್ಥಿ, ಪ್ರಗತಿಪರ ಕೃಷಿಕ  ಕೆದಂಬಾಡಿ ಲಕ್ಷ್ಮೀನಾರಾಯಣ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ  ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟ ಉದ್ಘಾಟಿಸಿ ಮಕ್ಕಳಿಗೆ ಹಿತವಚನ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಧೀರ್ ಎಸ್. ಪಿ ಅವರ ನಿರ್ದೇಶನದಲ್ಲಿ  ಕ್ರೀಡಾ ತಂಡಗಳ ಆಕರ್ಷಕ ಪಥ ಸಂಚಲನ ಹಾಗೂ ಏರೋಬಿಕ್ಸ್ ಪ್ರದರ್ಶನ ನಡೆಯಿತು. 

ವಿದ್ಯಾರ್ಥಿನಿ ಸಿಂಚನಾ ಪ್ರಾರ್ಥಿಸಿದರು. ಶಾಲಾ ವಿದ್ಯಾರ್ಥಿನಿ ಲಾವಣ್ಯ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ಸಂಚಾಲಕ  ಗಿಳಿಯಾಲು ಮಹಾಬಲೇಶ್ವರ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ನಿರ್ಮಲ ವಂದಿಸಿದರು. ಸಹ ಶಿಕ್ಷಕಿ  ವಿನುತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ. ಹಾಜಿ ಎಸ್ ಅಬೂಬಕ್ಕರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರವೀಂದ್ರ ಭಂಡಾರಿ ಬೈಂಕ್ರೋಡು, ದ.ಕ ಜಿ ಪ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇದರ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈ, ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಈಶ್ವರ ಭಟ್, ಸಹ ಶಿಕ್ಷಕರು, ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here