
ಪುತ್ತೂರು: ಕಬಕ ಗ್ರಾಮದ ಮುರ ಎಂಬಲ್ಲಿರುವ ರೈಲ್ವೇ ಬ್ರಿಡ್ಜ್ ಬಳಿ, ವ್ಯಕ್ತಿಯೋರ್ವ ಮಾದಕವಸ್ತುವನ್ನಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದ ವ್ಯಕ್ತಿಯೊಬ್ವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಕಬಕ ನಿವಾಸಿ ಉಮ್ಮರ್ ಫಾರೂಕ್ (41ವ) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್ ಐ ಆಂಜನೇಯ ರೆಡ್ಡಿ, ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಆರೋಪಿತನನ್ನು ಬಂಧಿಸಿದ್ದಾರೆ. ಆರೋಪಿಯು ಮಾರಾಟ ಮಾಡಲು ಅಕ್ರಮವಾಗಿ ಇಟ್ಟುಕೊಂಡಿದ್ದ 10 ಗ್ರಾಂ ಎಂಡಿಎಂ ಎಂಬ ನಿಷೇಧಿತ ಮಾದಕವಸ್ತು ಪತ್ತೆಯಾಗಿರುತ್ತದೆ. ಆರೋಪಿಯನ್ನು ಮುಂದಿನ ಕಾನೂನುಕ್ರಮಕ್ಕಾಗಿ ವಶಕ್ಕೆ ಪಡೆದು, ಆತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ವಿರುದ್ದ 6 ಪ್ರಕರಣ:
ಬಂಧಿತ ಆರೋಪಿಯ ಪ್ರಾಥಮಿಕ ವಿಚಾರಣೆ ವೇಳೆ, ಈತನ ವಿರುದ್ಧ ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 6 ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.