ಪಟ್ಟೆ ಬಡಗನ್ನೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಹತ್ತನೆಯ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವು ಡಿ. 3 ರಂದು ನಡೆಯಿತು.
ಕಾರ್ಯಕ್ರಮವನ್ನು ಸಂಸ್ಥೆಗಳ ಆಡಳಿತ ಮಂಡಳಿಯ ನಿರ್ದೇಶಕ ಗಣರಾಜ ಕುಂಬ್ಳೆ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶದ ಕಡೆಗೆ ಗಮನಹರಿಸುವುದು ಅವಶ್ಯಕವಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ| ಕೃಷ್ಣಮೂರ್ತಿ ಟಿ ಉಜಿರೆ, ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ರವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗಾಗಿ ತರಬೇತಿಗಳು ಅವಶ್ಯಕವಾಗಿದೆ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಮುಖ್ಯ ಗುರು ಸುಮನಾ ಬಿ ಸ್ವಾಗತಿಸಿ, ಸಹ ಶಿಕ್ಷಕಿಯಾರದ ಭವಿತಾ ಪಿ ವಂದಿಸಿದರು. ಶೈಲಶ್ರೀ ಕಾರ್ಯಕ್ರಮ ನಿರೂಪಿಸಿದರು.
ತರಬೇತಿ ಕಾರ್ಯಕ್ರಮ
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಕೃಷ್ಣಮೂರ್ತಿ ಟಿ ಉಜಿರೆ ರವರು ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತೆ, ಏಕಾಗ್ರತೆ, ಗೃಹಣಶಕ್ತಿ ಮತ್ತು ಆಸಕ್ತಿ ಹುಟ್ಟಿಸುವ ಕುರಿತಾದ ಚಟುವಟಿಕೆಗಳ ಮೂಲಕ ಒಂದು ದಿನದ ತರಬೇತಿಯನ್ನು ನೀಡಿದರು.
