ಪುತ್ತೂರು: ಆರ್ಯಾಪು ಗ್ರಾಮದ ಮುಚ್ಚಿಮಲೆ ಮತ್ತು ಕಿನ್ನಿಮಜಲು ಎಂಬಲ್ಲಿ ಅಳವಡಿಸಲಾಗಿದ್ದ ಸೋಲಾರ್ ಬೀದಿ ದೀಪಗಳು ಕಳವಾಗಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೂರು ನೀಡಿದ್ದಾರೆ.
ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಆರ್ಯಾಪು ಗ್ರಾಮದ ಮಚ್ಚಿಮಲೆ ಎಂಬಲ್ಲಿ ರೂ.24,550 ಮತ್ತು ಕಿನ್ನಿಮಜಲು ಎಂಬಲ್ಲಿ ರೂ.24,550 ಮೊತ್ತದಲ್ಲಿ ಅಳವಡಿಸಿದ ಸೋಲಾರ್ ಬೀದಿ ದೀಪಗಳೆರಡು ಕಳವಾಗಿರುವುದು ಡಿ.2ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಈ ಕುರಿತು ಆರ್ಯಾಪು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ.ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
