




ಪುತ್ತೂರು: ರಿಕ್ಷಾವೊಂದು ಪಲ್ಟಿಯಾದ ಘಟನೆ ಡಿ.3ರಂದು ರಾತ್ರಿ ಕುಂಬ್ರ ಭಾರತ್ ಪೆಟ್ರೋಪ್ ಪಂಪ್ ಸಮೀಪ ನಡೆದಿದೆ. ಘಟನೆಯಲ್ಲಿ ರಿಕ್ಷಾ ಜಖಂಗೊಂಡಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಅಡ್ಡ ಬಂದ ಕಾರೊಂದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲೆಂದು ರಿಕ್ಷಾ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದಲ್ಲಿ ಚಾಲಕ ಮಾತ್ರ ಇದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.









