ಉಕ್ಕುಡ: ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಮರಕ್ಕೆ ಡಿಕ್ಕಿ

0

ವಿಟ್ಲ: ಕಾಸರಗೋಡು-ಪುತ್ತೂರು ಮಧ್ಯೆ ಸಂಚರಿಸುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಉಕ್ಕುಡ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.


ಬಸ್ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ ಆಘಾತಕ್ಕೊಳಗಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here